ಬೆಂಗಳೂರು, (www.thenewzmirror.com) ;
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡು ಮಗ ಸಾವನ್ನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಗ್ರಾಮದ ಪವನ್ (20) ಮೃತ ಯುವಕ. ಪವನ್ ತಂದೆ ನಾಗೇಶ(45) ಕಾಲಿಗೆ ತೀವ್ರ ಪೆಟ್ಟಾಗಿದ್ದು, ಹೊಸಕೋಟೆಯ ಎಂವಿಜೆ ಅಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿ ಛಿದ್ರ ಛಿದ್ರಗೊಂಡಿದೆ. ಕಾಡುಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.