ಬೆಂಗಳೂರು, (www.thenewzmirror.com) :
ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟದ ಹೊಗೆ ಇನ್ಮೂ ತಣ್ಣಗಾಗುವ ಮೊದಲೇ ಸರ್ಕಾರಕ್ಕೆ ಬಾಂಬ್ ಬೆದರಿಕೆ ಕುರಿತಂತೆ ಮೇಲ್ ಬಂದಿದೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವರಿಗೆ ಬೆದರಿಕೆಯ ಮೇಲ್ ಬಂದಿದ್ದು, ಭಯ ಹುಟ್ಟಿಸುವಂತೆ ಮಾಡಿದೆ.
ಈ ಮೇಲ್ ಶಾಹಿರ್ ಖಾನ್10786 ಎಂಬ ಇ ಮೇಲ್ ಮೂಲಕ ಬಂದಿದ್ದು 2.5 ಮಿಲಿಯನ್ ಡಾಲರ್ ಹಣ ಹಾಕದಿದ್ದರೆ ಬಸ್, ರೈಲು, ದೇವಾಲಯ, ಹೋಟೆಲ್ ಸೇರಿದಂತೆ ಕರ್ನಾಟಕದಾದ್ಯಂತ ಸ್ಫೋಟ ನಡೆಸುತ್ತೇವೆ. ಅಂಬಾರಿ ಉತ್ಸವ್ ಬಸ್ ಸ್ಫೋಟಗೊಳಿಸಿ ಮತ್ತೊಂದು ಟ್ರೇಲರ್ ತೋರಿಸುತ್ತೇವೆ. ನಂತರ ನಮ್ಮ ಬೇಡಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸುತ್ತೇವೆ ಎಂದು ಎರಡು ಮೇಲ್ ಗಳಲ್ಲಿ ತಿಳಿಸಿದ್ದಾನೆ.
ಈ ಮೇಲ್ ಅನ್ನ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಮೇಲ್ ಕಳುಹಿಸಿರುವ ಐಪಿ ಅಡ್ರೆಸ್ ಹಾಗೂ ಮೇಲ್ ಮಾಡಿದವನ ಪತ್ತೆಗೆ ಬಲೆ ಬೀಸಿದೆ.
ಎರಡು ಮೂರು ದಿನಗಳ ಹಿಂದೆಯೇ ಬಂದಿದ್ದು, ಇದನ್ನು ಬಹಿರಂಗಗೊಳಿಸಿರಲಿಲ್ಲ. ಈ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಡಿಸಿಎಂ ಮಾಹಿತಿ ನೀಡಿದರು. ಇದು ಬೋಗಸ್ ಅಥವಾ ನಿಜವೋ ಗೊತ್ತಿಲ್ಲ. ನಾವು ಮೇಲ್ ಬಂದ ಕೂಡಲೇ ಪೊಲೀಸರಿಗೆ ಕಳುಹಿಸಿದ್ದು ಅವರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.