ಕೊಲ್ಕತ್ತಾ, (www.thenewzmirror.com) :
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಮನೆಯ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಎಸ್‌ಎಸ್ಕೆಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಹಣೆಗೆ ಹೊಲಿಗೆ ಹಾಕಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಹಣೆಗೆ ಗಾಯವಾಗಿ ರಕ್ತಬರುತ್ತಿರುವ ಫೋಟೊವೊಂದನ್ನು ಟಿಎಂಸಿ ಎಕ್ಸ್ ನಲ್ಲಿ ಹಂಚಿಕೊಂಡಿದೆ.
ಮೂಲಗಳ ಪ್ರಕಾರ, ಆರಂಭಿಕ ವರದಿಗಳ ಪ್ರಕಾರ, ಮಮತಾ ಅವರ ಹಣೆಗೆ ದೊಡ್ಡ ಗಾಯವಾಗಿದ್ದು, ಫೋಟೋಗಳು ವೈರಲ್ ಆಗುತ್ತಿವೆ. ಮಮತಾ ಅವರು ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಫೋಟೋಗಳನ್ನು ಹಂಚಿಕೊಂಡಿದ್ದು, ಹಣೆಯ ಮಧ್ಯದಲ್ಲಿ ಆಳವಾದ ಗಾಯ ಮತ್ತು ಮುಖದ ಮೇಲೆ ರಕ್ತ ಹರಿದು ಬರುತ್ತಿರುವುದನ್ನು ಕಾಣಬಹುದಾಗಿದೆ.