ಬೆಂಗಳೂರು, (www.thenewzmirror.com) :
ಸ್ಟಾರ್ ನಟ ಅಜಿತ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಆರೋಗ್ಯದಲ್ಲಿ ಏರು ಪೇರು ಕಂಡು ಬಂದ ಹಿನ್ನಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶೂಟಿಂಗ್ ವೇಳೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೂಕ್ತ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾವುದೇ ಭಯಪಡುವ ಅಗತ್ಯವಿಲ್ಲ, ಚಿಕ್ಕಪುಟ್ಟ ಆರೋಗ್ಯ ತೊಂದರೆ ಹಿನ್ನೆಲೆ ಅವರು ತಪಾಸಣೆಗೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಗಿಜ್ ತಿರುಮೇನಿ ನಿರ್ದೇಶನದ ಮತ್ತು ಲೈಕಾ ನಿರ್ಮಾಣದ ಚಿತ್ರದಲ್ಲಿ ಅಜಿತ್ ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.