Bus Leakage | ವಾಸ್ತವಾಂಶ ತೋರಿಸಿದ್ದಕ್ಕೆ ಚಾಲಕನಿಗೆ ಶಿಕ್ಷೆ..!

ಬೆಂಗಳೂರು, (www.thenewzmirror.com) ;

ಸೂರುತಿಹುದು ಬಸ್ ನ ಮಾಳಿಗೆ ಕುರಿತಾದ ವರದಿ ಪ್ರಸಾರ ಆಗುತ್ತಿದ್ದಂತೆ ವಾಸ್ತವಾಂಶ ತೋರಿಸಿದ ಬಸ್ ನ ಚಾಲಕನ ವಿರುದ್ಧ ಸಂಸ್ಥೆ ಕ್ರಮ ಕೈಗೊಂಡಿದೆ.

RELATED POSTS

NWKRTC ಗೆ ಸೇರಿದ ಬಸ್ ನಲ್ಲಿ ಚಷಾವಣಿ ತೋರುತ್ತಿದ್ದರೂ ಒಂದು ಕೈ ಯಲ್ಲಿ ಕೊಡೆ ಹೊಡೊದು ಮತ್ತೊಂದು ಕೈಯಲ್ಲಿ ಸ್ಟೇರಿಂಗ್ ಹಿಡಿದು ಬಸ್ ಚಾಲನೆ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಅಷ್ಟೇ ಅಲ್ದೆ ಕೆಲ ಮಾಧ್ಯನಗಳೂ ಈ ವರದಿಯನ್ನ ಪ್ರಸಾರ ಮಾಡಿದ್ದವು.

ಅಷ್ಟೇ ಅಲ್ದೆ ವಾಸ್ತವಾಂಶ ತೋರಿಸಿದ ಚಾಲನ ವಿರುದ್ಧವೂ ಕ್ರಮ ಆಗಬಹುದು ಎಂದು ಅಂದಾಜಿಸಲಾಗಿತ್ತು. ಅದರಂತೆ NWKRTC ಆಡಳಿತ ಮಂಡಳಿ ಚಾಲಕನನ್ನ ಅಮಾನತು ಮಾಡಿ ಆದೇಶ ಹೊರಡಿಸಿದೆ. ಅಷ್ಟೇ ಅಲ್ದೆ ಕೆಲ ಸ್ಪಷ್ಟನೆ ನೀಡಿದ್ದು, ಅದರಂತೆ ಈ ವಿಷಯವಾಗಿ ಧಾರವಾಡ ಗ್ರಾಮಾಂತರ ವಿಭಾಗದ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಅದರನ್ವಯ, ದಿನಾಂಕ: 23-05-2024 ರಂದು ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25   ಎಫ್-1336 ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕರಾಗಿ ಶ್ರೀ ಹನುಮಂತಪ್ಪ ಅ ಕಿಲ್ಲೇದಾರ, ಬಿ.ಸಂ-1203 D ಹಾಗೂ ನಿರ್ವಾಹಕರಾಗಿ ಶ್ರೀಮತಿ ಅನಿತಾ ಎಚ್. ಬಿ ಸಂ-396 ರವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದ ಆ ಸಮಯದಲ್ಲಿ ಅಂದರೆ ಸುಮಾರು 16:30 ಕ್ಕೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಇದ್ದುದರಿಂದ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು, ಹಿಡಿದುಕೊಂಡು ವಾಹನ ಚಾಲನೆ ಮಾಡಿರುತ್ತಾರೆ. ಇದನ್ನು ಸದರಿ ನಿರ್ವಾಹಕಿಯು ವಿಡಿಯೋ ಚಿತ್ರೀಕರಣ ಮಾಡಿರುತ್ತಾರೆ.


ಆ ಸಮಯದಲ್ಲಿ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಾಗಲಿ ಸೋರಿಕೆ (Roof Leakage) ಇರಲಿಲ್ಲ ಎಂದು ತಿಳಿದುಬಂದಿರುತ್ತದೆ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲು ಆಗಿರುವುದಿಲ್ಲ. ಸದರಿ ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿ ಮೇಲ್ಚಾವಣಿಯು ಸೋರದೆ ಇರುವುದನ್ನು ಖಚಿತಪಡಿಸಿಕೊಳ್ಳಲಾಗಿದೆ. ಈ ಕುರಿತು ಸದರಿ ಚಾಲನಾ ಸಿಬ್ಬಂದಿಗಳಿಂದ ಸ್ಪಷ್ಟೀಕರಣ ಪಡೆಯಲಾಗಿ  ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಚಿತ್ರೀಕರಣವಾಗಿರುತ್ತದೆ ಎಂದು ಹೇಳಿಕೆ ನೀಡಿದ್ದು, ಈ ಮೂಲಕ  ಸ್ಪಷ್ಟೀಕರಣ ನೀಡಲಾಗಿದೆ.

ಹಾಗೆನೇ ಸದರಿ‌ ಬಸ್ಸಿನ ಚಾಲಕ ಮತ್ತು ನಿರ್ವಾಹಕರನ್ನು  ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ ಎಂದು  NWKRTC  ಆಡಳಿತ ವರ್ಗ ಮಾಹಿತಿ ನೀಡಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist