ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಸರು ಬದಲಾವಣೆಗೆ ಸಂಪುಟ ಸಭೆ ಗ್ರೀನ್ ಸಿಗ್ನಲ್

RELATED POSTS

ಚಿಕ್ಕಬಳ್ಳಾಪುರ(www.thenewzmirror.com): ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು,ಬಾಗೇಪಲ್ಲಿ ಪಟ್ಟಣದ ಹೆಸರನ್ನು  ಭಾಗ್ಯನಗರ ಎಂದು,ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮಕರಣ ಮಾಡುವುದು ಸೇರಿದಂತೆ ಹಲವು ಐತಿಹಾಸಿಕ ತೀರ್ಮಾನಗಳನ್ನು ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಶೇ90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ,ಒಟ್ಟು 48 ವಿಷಯಗಳು ಚರ್ಚೆಯಾಗಿದೆ, 3400 ಕೋಟಿ ಮೊತ್ತವನ್ನು ಮಂಜೂರು ಮಾಡಿದ್ದೇವೆ,2050 ಕೋಟಿ ಬೆಂಗಳೂರು ಜಿಲ್ಲಾ ಭಾಗಕ್ಕೇ ಕೊಟ್ಟಿದ್ದೇವೆ ಎಂದರು.

ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆ ನೀಡಲಾಗುತ್ತದೆ, 24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನಿಸಿದ್ದು, ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡುತ್ತೇವೆ.9807ಕೋಟಿ ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ ನ‌ ಕೆಲಸ 85% ಮುಗಿದಿದೆ.ಹೆಚ್ಚುವರಿಯಾಗಿ ಇದಕ್ಕೆ 8000 ಕೋಟಿ ಬೇಕಾಗಿದೆ. ಬಾಕಿ ಉಳಿದಿರುವುದು 6000 ಚಿಲ್ಲರೆ ಕೋಟಿ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡ್ತೀವಿ,ಈ ಸಂಪುಟ ಸಭೆಯಲ್ಲಿ  ಚರ್ಚೆಯಾಗಿದೆ.  ಮುಂದಿನ‌ ಕ್ಯಾಬಿನೆಟ್ ನಲ್ಲಿ ನಿರ್ಣಯಿಸಲು ತೀರ್ಮಾನಿಸಲಾಗಿದೆ ಎಂದರು.

ಬೆಂಗಳೂರು ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿ 2250 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ.ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ.ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಭೇತಿಗೆ 10 ಕೋಟಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು.ಬೆಂಗಳೂರು ಕೇಂದ್ರ ವಿವಿಗೆ “ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ” ಎಂದು ಹೆಸರಿಡಲು ತೀರ್ಮಾನಿಸಲಾಗಿದೆ ಎಂದರು.

PHC ಗಳಿಲ್ಲದ ಹೊಸ ತಾಲ್ಲೂಕುಗಳಲ್ಲಿ CHC ಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಬೆಂಗಳೂರು ಉತ್ತರ ಜಿಲ್ಲೆ” ಎಂದು ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲಾಗುವುದು ಎಂದರು.

ನಂದಿ ಬೆಟ್ಟದಲ್ಲಿ  ನಡೆದ ಈ ಸಭೆಯು ಈ ವರ್ಷದ 14 ನೇ ಸಭೆಯಾಗಿದೆ.ನಾವು ಆಡಳಿತವನ್ನು  ಬೆಂಗಳೂರು ಕೇಂದ್ರಿತ ಎಂಬುದನ್ನು  ತಪ್ಪಿಸಿ  ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು  ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ  ನಡೆಸುತ್ತಿದ್ದೇವೆ. ಮೊದಲಿಗೆ ಕಲ್ಬುರ್ಗಿಯಲ್ಲಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಿದ್ದೆವು.ಈಗ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ.ಈ ಸಚಿವ ಸಂಪುಟ ಸಭೆಯಲ್ಲಿ ನಾವು 3400 ಕೋಟಿ ರೂಗಳಿಗೆ ಅನುಮೋದನೆ ನೀಡಿದ್ದೇವೆ. ಈ ಸಭೆಯಲ್ಲಿ  ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ   ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ ಎಂದರು.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ  ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು  ಹೆಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ  ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು / ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist