Political News | ನಾಳೆ ಕಲಬುರಗಿಯಲ್ಲಿ  ಸಚಿವ ಸಂಪುಟ ಸಭೆ: ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ಅನುದಾನ ಘೋಷಣೆ..!

Cabinet meeting in Kalaburagi tomorrow: 5000 crore grant announcement for welfare Karnataka..!

ಬೆಂಗಳೂರು, (www.thenewzmirror.com) ;

ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

RELATED POSTS

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ  ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ  ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

371 ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ  371 ಜೆ ಕಾನೂನು ತರಲಾಗಿದ್ದು,, ಇದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು.  2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತರು ಬಿಜೆಪಿಯವರಲ್ಲ.  ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದರು.

ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ಅನುದಾನ

ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ  ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist