ಬೆಂಗಳೂರು, (www.thenewzmirror.com);
ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಘಟನೆ ನಡೆದ ಬಳಿಕವಂತೂ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ.
ಒಂದ್ಕಡೆ ಪಾಕ್ ಗಡಿಯಲ್ಲಿ ತನ್ನ ಸೇನೆಯನ್ನ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡ್ತಿದ್ರೆ, ಇದಕ್ಕೆ ಪ್ರತ್ಯುತ್ತರವಾಗಿ ಭಾರತನೂ ಸೇನೆಯಲ್ಲಿ ಗಡಿಯಲ್ಲಿ ನಿಯೋಜಿಸುವ ಕೆಲ್ಸವನ್ನ ಮಾಡುತ್ತಿದೆ.


ಗಡಿಯ ಬೆಳವಣಿಗೆಗಳನ್ನ ಗಮನಿಸಿದ್ರೆ ಯಾವ ಕ್ಷಣದಲ್ಲಿ ಬೇಕಾದರೂ ಯುದ್ಧ ಘೋಷಣೆ ಆಗಬಹುದು. ಯುದ್ಧದ ಪರಿಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರಕ್ಕೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಭಂಧವಿಧಿಸಿದೆ.
ಮಾಧ್ಯಮಗಳಿಗೆ ಈ ನಿರ್ಭಂಧ ವಿಧಿಸಿರುವ ಸಚಿವಾಲಯ, ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಎಲ್ಲಾ ಮಾಧ್ಯಗ ವೇದಿಕೆಗಳು,. ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ರಕ್ಷಣೆ ಮತ್ತು ಇತರ ಭದ್ರತೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಗೆ ಕುರಿತಂತೆ ವರದಿ ಮಾಡುವಾಗ ಜವಾಬ್ದಾರಿಯಿಂದ ವರದಿ ಮಾಡಬೇಕೆಂದು ಸಲಹೆ ನೀಡಿದೆ.