ಸಿಇಟಿ-2023 ಅರ್ಜಿ ತಿದ್ದುಪಡಿಗೆ ಕೊನೆಯ ಅವಕಾಶ

ಬೆಂಗಳೂರು, (www.thenewzmirror.com ); ಸಿಇಟಿ-2023ಕ್ಕೆ ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಟ್ಟಕಡೆಯ ಅವಕಾಶ ನೀಡಿದೆ.

ಕೆಇಎ ಕಾಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಮಂಗಳವಾರ ಪತ್ರಿಕಾ ಹೇಳಿಕೆಯಲ್ಲಿ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು 21-05-2023 ರ ಸಂಜೆ 6ರಿಂದ 24-05-2023 ರ ರಾತ್ರಿ 11.59 ರವರೆಗೆ ಮಾಹಿತಿ ತಿದ್ದುಪಡಿ ಮಾಡಬಹುದು ಎಂದಿದ್ದಾರೆ.

RELATED POSTS

ಸಿಇಟಿ-2023 ರ ಫಲಿತಾಂಶ ಪ್ರಕಟಿಸುವ ಮುನ್ನ ಇದು ತಿದ್ದುಪಡಿಗೆ ಕೊನೆಯ ಅವಕಾಶ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಸಿಇಟಿ-2023ರ ಫಲಿತಾಂಶ ಘೋಷಣೆಯಾದ ಮೇಲೆ ಯಾವುದೇ ಕಾರಣಕ್ಕೂ  ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ಮಾಡಲು ಅಥವಾ ಮೀಸಲಾತಿ ಕ್ಷೇಮ್ ಮಾಡಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಆದ್ದರಿಂದ ಅಭ್ಯರ್ಥಿಗಳು ಮತ್ತು ಪೋಷಕರು ತಮಗೆ ಸಂಬಂಧಿಸಿದ ಅರ್ಜಿಗಳಲ್ಲಿ ಮಾಡಿರುವ ಕ್ಷೇಮ್‌ಗಳನ್ನು / ಮಾಹಿತಿಯನ್ನು ತಪ್ಪದೇ ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ವಿವರಕ್ಕೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ ಸೈಟ್ http://kea.kar.nic.in ನೋಡಬಹುದು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist