ಚನ್ನಪಟ್ಟಣ, (www.thenewzmirror.com) ;
ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಹೋಲಿಸಿದರೆ ಚನ್ನಪಟ್ಟಣ ಕ್ಷೇತ್ರ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಬಿಜೆಪಿಯಲ್ಲಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್, ದಿಢೀರ್ ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಗೆ ಮರಳಿದ್ರು. ಇದರ ಬೆನ್ನಲ್ಲೇ ಚನ್ನಪಟ್ಟಣ ಉಪಚುನಾವಣೆಗೆ ಸಿಪಿವೈಗೆ ಕಾಂಗ್ರೆಸ್ ಟಿಕೆಟ್ ಅನೌನ್ಸ್ ಮಾಡಿತ್ತು.
ಇದೀಗ ಸಿಪಿವೈ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಶಕ್ತಿ ಪ್ರದರ್ಶನ ತೋರಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಗಣ್ಯಾತೀಗಣ್ಯರು ಈ ವೇಳೆ ಉಪಸ್ಥಿತರಿದ್ದರು