ಖಾತೆ ಹಂಚಿಕೆ ವಿಳಂಬವಾಗಿಲ್ಲ, ಶೀಘ್ರದಲ್ಲೇ ಅಂತಿಮ ನಿರ್ಧಾರ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು(www.thenewzmirror.com): ರಾಜ್ಯದಲ್ಲಿ ನೂತನ ಸಚಿವರ ಪ್ರಮಾಣವಚನ ಮುಕ್ತಾಯ ಬೆನ್ನಲ್ಲೇ ತೀವ್ರ ಕುತೂಹಲ ಮೂಡಿಸಿರುವ ಖಾತೆ ಹಂಚಿಕೆ ಪ್ರಕ್ರಿಯೆಯ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವರ ಖಾತೆ ಹಂಚಿಕೆಯಲ್ಲಿ ಯಾವುದೇ ರೀತಿಯ ವಿಳಂಬ ಅಥವಾ ಗೊಂದಲಗಳು ಉಂಟಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

RELATED POSTS

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಖಾತೆ ಹಂಚಿಕೆ ವಿಳಂಬವಾಗುತ್ತಿದೆ ಎಂಬ ವಿರೋಧ ಪಕ್ಷಗಳ ಟೀಕೆ ಹಾಗೂ ಮಾಧ್ಯಮಗಳ ವರದಿಗಳಿಗೆ ತಣ್ಣೀರರೆಚಿರುವ ಮುಖ್ಯಮಂತ್ರಿಗಳು, ಇಲಾಖೆಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಯಾರಲ್ಲೂ ಅಸಮಾಧಾನವಿಲ್ಲ:

ಪಕ್ಷದ ಹಿರಿಯ ನಾಯಕರು ಮತ್ತು ಹೈಕಮಾಂಡ್ ಜೊತೆ ಚರ್ಚಿಸಿ ಅರ್ಹತೆಗೆ ತಕ್ಕಂತೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಸಚಿವರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎಂದು ಸಿಎಂ ಮಾಧ್ಯಮಗಳಿಗೆ ತಿಳಿಸಿದರು. ಅಭಿವೃದ್ಧಿ ಆಡಳಿತ ನೀಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಖಾತೆಗಳ ಹಂಚಿಕೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ ಎಂದಿದ್ದಾರೆ.

ಸಿಎಸ್‌ಆರ್ ನಿಧಿ ಸಮರ್ಪಕ ಬಳಕೆ:

ಇದೇ ವೇಳೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯ ಬಳಕೆಯ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಿಎಸ್‌ಆರ್ ಹಣವನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ನಿರ್ದಿಷ್ಟ ಕಾರ್ಯತಂತ್ರ ರೂಪಿಸುತ್ತಿದೆ ಎಂದು ತಿಳಿಸಿದರು. ವಿರೋಧ ಪಕ್ಷಗಳು ಕೇವಲ ರಾಜಕೀಯ ಕಾರಣಕ್ಕಾಗಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist