ಸಿಎಂ ಎಲ್ಲಾ ಹೇಳಿದ್ದಾರೆ,ಸಧ್ಯಕ್ಕೆ ನಾನು ಯಾವ ಉತ್ತರ ನೀಡಲ್ಲ:ಡಿಕೆ ಶಿವಕುಮಾರ್

RELATED POSTS

ಬೆಂಗಳೂರು(www.thenewzmirror.com):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ.ಮುಖ್ಯಮಂತ್ರಿ‌ಸ್ಥಾನದ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸಧ್ಯಕ್ಕೆ ನಾನು ಯಾವುದೇ ಉತ್ತರವನ್ನೂ ನೀಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಡಿ.ಕೆ. ಶಿವಕುಮಾರ್ ಅವರಿಗೆ ಕೆಲವು ಶಾಸಕರ ಬೆಂಬಲ ಮಾತ್ರವಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಚರ್ಚೆಯಾಗುತ್ತಿದೆ, “ನಾನು ಪಕ್ಷದ ರಾಜ್ಯ ಅಧ್ಯಕ್ಷ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ನಾನು ನಿನ್ನೆ ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ. ನಿಮ್ಮ ಪ್ರಶ್ನೆಗಳಿಗೆ ಅವರೇ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ. ನೀವುಗಳು ಸಹ ಮತ್ತೆ ಆ ವಿಚಾರವಾಗಿ ಪ್ರಶ್ನೆ ಮಾಡುವುದು ಸೂಕ್ತವಲ್ಲ” ಎಂದು ಹೇಳಿದರು.

ಈ ಹಿಂದೆ ನನ್ನ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಕೇಳಿದಾಗ, “ನಿಮಗೆ ನಮ್ಮ ವಿಚಾರದಲ್ಲಿ ಯಾಕೆ ಗಾಬರಿ? ಈ ವಿಚಾರದಲ್ಲಿ ನಮಗೆ ಗಾಬರಿಯಿಲ್ಲ” ಎಂದರು.

ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಆಸೆ ಅನೇಕರಿಗೆ ಇರುತ್ತದೆ ಎಂದು ಕೇಳಿದಾಗ, “ನಿಮ್ಮಲ್ಲೂ ಅನೇಕರಿಗೆ ಅನೇಕ ಆಸೆ ಇರುತ್ತವೆ. ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಅವಶ್ಯಕತೆ ಇಲ್ಲ. ಯಾರು ಏನೇನು ಮಾತನಾಡಿದ್ದಾರೆ, ಅವರೇ ಪ್ರಶ್ನೆ ಉತ್ತರ ಎಲ್ಲವನ್ನು ನೀಡಿದ್ದಾರೆ. ಸಧ್ಯಕ್ಕೆ ನಾನು ಯಾವುದೇ ಉತ್ತರ ನೀಡುವುದಿಲ್ಲ” ಎಂದು ತಿಳಿಸಿದರು.

ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ಯಾವ ರಾಜಕೀಯ ಚರ್ಚೆಯಾಗಿದೆ? ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲಾ ಶಾಸಕರು ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಶ್ರಮಿಸಿರುವವರಿಗೆ ಹಾಗೂ ಕೆಲವರಿಗೆ ನಾವು ಕೊಟ್ಟಿರುವ ಮಾತಿಗೆ ಬದ್ಧವಾಗಿ ಸ್ಥಾನಮಾನ ನೀಡಬೇಕಿದೆ. ಇದು ಅಂತಿಮ ಹಂತಕ್ಕೆ ಬಂದಿದೆ. ಇದರ ಪ್ರಸ್ತಾವನೆಯನ್ನು ಮತ್ತೊಮ್ಮೆ ದೆಹಲಿಗೆ ಕಳುಹಿಸಿ ಅನುಮತಿ ಪಡೆಯಲಾಗುವುದು” ಎಂದರು.

ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: 

“ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ. ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರ ಜತೆಗೂ ಮಾತನಾಡಿದ್ದೇನೆ. ಎರಡು ರಾಜ್ಯಗಳ ನಡುವೆ ರಾಜಿಗೆ ಸಲಹೆ ನೀಡಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರದಲ್ಲಿ ಕೆಲವು ತಾಂತ್ರಿಕ ಅಂಶಗಳಿವೆ. ಗೋವಾ ದವರು ನಮಗೆ ಶೋಕಾಸ್ ನೋಟೀಸ್ ನೀಡಿರುವುದು ಸರಿಯಲ್ಲ ಎಂದು ಹೇಳಿದ್ದು, ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದೆ” ಎಂದರು. 

“ಜೊತೆಗೆ ಹೊಸ ಯೋಜನೆಗಳಿಗೆ ಮನವಿ ಸಲ್ಲಿಸಿದ್ದೇವೆ. ಸಂಸತ್ ಅಧಿವೇಶನ ಸಂದರ್ಭದಲ್ಲಿ ಮತ್ತೊಮ್ಮೆ ದೆಹಲಿಗೆ ಹೋಗಿ, ರಾಜ್ಯದ ಸಂಸದರ ಜೊತೆ ಚರ್ಚೆ ನಡೆಸಿ ಒಟ್ಟಾಗಿ ಒತ್ತಾಯ ಹೇರಲು ಮನವಿ ಮಾಡಲಾಗುವುದು” ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಸಂಬಂಧ ಲಕ್ಕೇನಹಳ್ಳಿಯಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, “ನೀವು ರಸ್ತೆ, ಅಣೆಕಟ್ಟು ಸೇರಿದಂತೆ ಯಾವುದೇ ಯೋಜನೆ ಮಾಡಬೇಕಾದರೂ ವಿರೋಧ ವ್ಯಕ್ತವಾಗುತ್ತದೆ. ಕುಡಿಯುವ ನೀರು ಪೂರೈಸಲೇಬೇಕು. ಈ ನೀರನ್ನು ಎಲ್ಲಾದರೂ ಸಂಗ್ರಹ ಮಾಡಿಕೊಳ್ಳಬೇಕು. ಲಕ್ಕೇನಹಳ್ಳಿ ಮಾತ್ರವಷ್ಟೇ ಅಲ್ಲ, ಕೊರಟಗೆರೆ ಭಾಗದಲ್ಲಿ ಕೆಲವು ಪ್ರದೇಶ ಬಳಸಿಕೊಳ್ಳಬೇಕು ಎಂದು ಆಲೋಚಿಸಿದ್ದೆವು. ನೀರು ಹೇಗೆ ಹರಿಯುತ್ತದೆ ಹೇಳಲು ಸಾಧ್ಯವಿಲ್ಲ. ಈ ವಿಚಾರವಾಗಿ ಪರಮೇಶ್ವರ್ ಅವರ ಜತೆ ಚರ್ಚಿಸಿ, ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist