Good News | ಮೆಟ್ರೋ ದರ ಕಡಿಮೆ ಮಾಡಲು ನಮ್ಮ ಮೆಟ್ರೋಗೆ ಸಿಎಂ ಸೂಚನೆ

CM instructs our metro to reduce metro fare

ಬೆಂಗಳೂರು, (www.thenewzmirror.com) ;

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ನಗರದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದು ನೇರವಾಗಿ ಜನಸಾಮಾನ್ಯರ ಮೇಲೆ ಪ್ರಭಾವ ಬೀರುತ್ತಿದ್ದು, ಮಧ್ಯಮ ವರ್ಗದ ಜನರು ತೊಂದರೆ ಅನುಭವಿಸುವಂತಾಗಿದೆ. ಇದೀಗ ಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

RELATED POSTS

ಮೆಟ್ರೋ ಟಿಕೆಟ್ ದರ ಇಳಿಕೆ ಮಾಡುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಸಿಎಂ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?
ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಬೆಂಗಳೂರಿಗರ ಸಂಚಾರ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಟಿಕೆಟ್​ ದರ ಕಳೆದ ವಾರ ಯದ್ವಾತದ್ವಾ ಏರಿಕೆಯಾಗಿತ್ತು. ಇದರಿಂದ ಪ್ರಯಾಣಿಕರಿಗೆ ಭಾರೀ ಹೊರೆಯಾಗಿತ್ತು. ಶೇ.45 ರಿಂದ 50% ದರ ಏರಿಕೆ ಮಾಡಿದ್ದೇವೆ ಎಂದು ಬಿಎಂಆರ್​ಸಿಎಲ್​ ತಿಳಿಸಿತ್ತು. ಆದರೆ ಹಲವೆಡೆ ದರ ದುಪ್ಪಟ್ಟು ಆಗಿತ್ತು. ಪ್ರಯಾಣಿಕರು ಇದಕ್ಕೆ ಆಕ್ರೋಶದಿಂದ ಪ್ರತಿಕ್ರಿಯಿಸಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist