ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಪಡೆದ ಖ್ಯಾತಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ: ಬಸವರಾಜ ಬೊಮ್ಮಾಯಿ

RELATED POSTS

ಬೆಂಗಳೂರು(www.thenewzmirror.com): ಕರ್ನಾಟಕದ ಇತಿಹಾಸದಲ್ಲಿ ಕಳೆದ ಎರಡು ವರ್ಷ ಆರ್ಥಿಕವಾಗಿ ಕರಾಳ ದಿನಗಳು. ಕಳೆದ ಎರಡು ವರ್ಷದಲ್ಲಿ ಎರಡೂವರೆ ಲಕ್ಷ ಕೋಟಿ ಸಾಲ ಪಡೆದಿರುವುದೇ ರಾಜ್ಯ ಸರ್ಕಾರದ ಸಾಧನೆ. ಕರ್ನಾಕದ ಇತಿಹಾದಲ್ಲಿ ಅತಿ ಹೆಚ್ಚು ಸಾಲ ಪಡೆದ ಖ್ಯಾತಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಸರ್ಕಾರ ಸಂಪೂರ್ಣ ವಾಗಿ ಸಾಲದ ಮೇಲೆ ಅವಲಂಬನೆಯಾಗಿದೆ.  ಅದರ ಜೊತೆಗೆ ಪೆಟ್ರೋಲ್, ಡಿಸೇಲ್, ಅಬಕಾರಿ, ಹಾಲು, ನೀರು, ಕಸ, ಸ್ಟಾಂಪ್ ಡ್ಯೂಟಿ ಎಲ್ಲದರ ಮೇಲೆ ಅತಿ ಹೆಚ್ಚು ತೆರಿಗೆ ಹಾಕಿದ ಖ್ಯಾತಿ‌ ಸಿಎಂ ಸಿದ್ದರಾಮ್ಯದಯ ಅವರಿಗೆ ಸಲ್ಲುತ್ತದೆ. ಕಳೆದ ವರ್ಷ 40 ಸಾವಿರ ಕೊಟಿ ಹೆಚ್ಚುವರಿ ತೆರಿಗೆ ಹಾಕಿದ್ದರು. ಈ ವರ್ಷ 60 ಸಾವಿರ ಕೋಟಿ ರೂ.‌ಹೊಸ ತೆರಿಗೆ ಭಾರ ಜನರ ಮೇಲೆ ಹಾಕಿದ್ದಾರೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ನಿಂತಿದೆ. ಯಾವುದೇ ನಿರಾವರಿ ಯೋಜನೆ‌, ರಾಜ್ಯ ಹೆದ್ಸಾರಿ, ಮನೆ ಕಟ್ಟಲು ರಾಜ್ಯ ಸರ್ಕಾರ ಹಣ ನೀಡಿಲ್ಲ, ಕೇಂದ್ರದ ಹಣಕ್ಕೆ ಸಮನಾದ ವಂತಿಗೆಯನ್ನು ಬಿಡುಗಡೆ ಮಾಡುತ್ತಿಲ್ಲ.  ಗ್ಯಾರೆಂಟಿ ನೆಪದಲ್ಲಿ ಬಡವರನ್ನು ಇನ್ನಷ್ಟು ಬಡವರನ್ನಾಗಿ ಮಾಡುವ ಕೆಲಸ ಈ ಸರಕಾರ ಮಾಡಿದೆ. ಸರ್ಕಾರ ಸಾಮಾನ್ಯ ಜನರ ಬಾಯಲ್ಲಿ ಒಂದು ಶಾಪವಾಗಿ ಪರಿಣಮಿಸಿದೆ. ಕರ್ನಾಟವನ್ನು ಅಭಿವೃದ್ಧಿ ಮಾಡುವುದಿರಲಿ, ಕರ್ನಾಕವನ್ನು ಸಾಲಗಾರ ರಾಜ್ಯವನ್ನಾಗಿ ಮಾಡಿರುವುದು ಅತ್ಯಂತ ದುರ್ದೈವ. ಯಾವ‌ ಪುರುಷಾರ್ಥಕ್ಕಾಗಿ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ಜನರು ಕೇಳುತ್ತಿದ್ದಾರೆ. ಇದೊಂದು ಅಭಿವೃದ್ಧಿ ಶೂನ್ಯ ಜನವಿರೋಧಿ ಅತ್ಯಂತ ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist