Political News | ಪ್ರಾಸಿಕ್ಯೂಷನ್ ಗೆ ಅನುಮತಿ‌ ಕೊಟ್ಟಿದ್ದಕ್ಕೆ ಸಿಎಂ ಹೇಳಿದ್ದೇನು.? ತಪ್ಪೇ ಮಾಡಿಲ್ಲ ಅಂತ ಹೇಳ್ತಿದ್ದ ಸಿದ್ದರಾಮಯ್ಯರ ರಾಜೀನಾಮೆ ವಿಚಾರದಲ್ಲಿ ಹೇಳಿದ್ದೇನು.? 

ಬೆಂಗಳೂರು, (www.thenewzmirror com) ;

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

RELATED POSTS

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ ಎಂದು ಪ್ರತಿಕ್ರಿಯೆ ಕೊಟ್ರು.

ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು. ಎಂದರು.

ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,  ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿ ಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ.  ನವೆಂಬರ್ ತಿಂಗಳಲ್ಲಿ   ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist