ಕೆಜಿಎಫ್,(www.thenewzmirror.com);
ಕಂಪ್ಯೂಟರ್ ಆವಿಷ್ಕಾರ ಮಾಡಿದ ವಿಜ್ಞಾನಿ ಚಾರ್ಲ್ಸ್ ಬ್ಯಾಬೇಜ್ ಅವರ ಹುಟ್ಟಿದ್ದ ದಿನವಾದ ಡಿ. 26 ರಂದು ರಾಜ್ಯದಲ್ಲಿ ಪ್ರತಿ ವರ್ಷ ‘ಕಂಪ್ಯೂಟರ್ ಆಪರೇಟರ್‌ಗಳ ದಿನ’ವನ್ನಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅನುಮತಿ ನೀಡಿದ್ದರು. ಅದರಂತೆ ಕೆ. ಜಿ.ಎಫ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಚಾರ್ಲ್ಸ್ ಬ್ಯಾಬೇಜ್ ಅವರ ಜನ್ಮದಿನದ ಅಂಗವಾಗಿ ಕಂಪ್ಯೂಟರ್ ಆಪರೇಟರ್ ಗಳ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಹರ್ತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ರು. ಇದೇ ವೇಳೆ ಕಚೇರಿಯಲ್ಲಿ ಕೆಲಸ ನಿರ್ವಹಣೆ ಮಾಡುತ್ತಿರುವ ಕಂಪ್ಯೂಟರ್ ಆಪರೇಟರ್ ಗಳಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕೆ.ಜಿ.ಎಫ್ ತಾಲ್ಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕಿನ ಎಲ್ಲಾ ಡಾಟಾ ಎಂಟ್ರಿ ಆಪರೇಟರ್ಸ್ ಸೇರಿದಂತೆ ತಾಲ್ಲೂಕು ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.