ಬೆಂಗಳೂರು, (www.thenewzmirror.com) ;
ಕಾಂಗ್ರೆಸಿಗೆ ಕಮಾಂಡೇ ಇಲ್ಲ ಇನ್ನು ಹೈಕಮಾಂಡ್ ಎಲ್ಲಿಂದ ಬರಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ವಿಷಯ ಭಾರಿ ಸದ್ದು ಮಾಡುತ್ತಿದೆ. ಸಿಎಂ ಬದಲಾವಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ರು.
ಕಾಂಗ್ರೆಸ್ ಶಾಸಕರೇ ಅಭಿವೃದ್ಧಿಗೆ ದುಡ್ಡು ಕೊಡಿ ಅನ್ನುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆ ಅನುದಾನಕ್ಕಾಗಿ ಜಗಳ ಮಾಡುತ್ತಿದ್ದಾರೆ. ನಮ್ಮ ಪರಿಸ್ಥಿತಿ ಕೆಟ್ಟಿದೆ ಎಂದು ಕಾಂಗ್ರೆಸ್ ಶಾಸಕರೇ ಮಾತನಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ವಾಲ್ಮಿಕಿ ನಿಗಮದ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಜವಾಬ್ದಾರಿ ಹೊರಬೇಕು. ಸಿಎಂ ಅದಕ್ಕೂ ನನಗೂ ಸಂಬಂಧವಿಲ್ಲ ಎಂಬಂತೆ ಇದ್ದಾರೆ. ಮುಖ್ಯಮಂತ್ರಿ ಬಳಿ ಹಣಕಾಸು ಇಲಾಖೆ ಇದೆ, ಸಿಎಂ ಗಮನಕ್ಕೆ ಬರದೇ ಹಗರಣ ನಡೆದಿದೆಯಾ? ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಸಿಎಂ ಡಿಸಿಎಂ ಬಗ್ಗೆ ಚರ್ಚೆ ನೋಡಿದರೆ ಸರ್ಕಾರ ನಿಷ್ಕ್ರಿಯವಾಗಿದೆ. ನೀವು ಒಳಗೆ ಮರೆತು ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಿ. ಚುನಾವಣೆಯ ಸೇಡು ತೀರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಮುಂಬೈ ಕರ್ನಾಟಕ ಭಾಗದ ಜನ ಕಾಂಗ್ರೆಸ್ ಪಕ್ಷದ ಕೈಹಿಡಿದಿಲ್ಲ. ಸರ್ಕಾರದ ನಿರಾಸಕ್ತಿಯಿಂದ ಕೆಲ ಕಂಪನಿ ಹೊರ ರಾಜ್ಯಕ್ಕೆ ಹೋಗಿವೆ ಎಂದು ಇದೇ ವೇಳೆ ಆರೋಪಿಸಿದರು.