Court News | ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಕಟ್ಟಡ, ಪಾರ್ಕ್ ಗಳಿಗೆ ಜೀವಂತ ರಾಜಕಾರಣಿಗಳ ಹೆಸರು ನಾಮಕರಣಕ್ಕೆ ಹೈ ಕೋರ್ಟ್ ಬ್ರೇಕ್..!

ಬೆಂಗಳೂರು, (www.thenewzmirror.com):

ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾಗುವ ಸರ್ಕಾರಿ ಕಟ್ಟಡ, ಪಾರ್ಕ್, ರಸ್ತೆ ಮತ್ತಿತರ ಸ್ಥಳಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರುಗಳು ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

RELATED POSTS

ದಾವಣಗೆರೆ ನಿವಾಸಿ ವಕೀಲ ಎ. ಸಿ. ರಾಘವೇಂದ್ರ, ಸರ್ಕಾರದ ಅನುದಾನದಲ್ಲಿ ಕಟ್ಟಲಾಗಿರುವ ಕಟ್ಟಡಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರು ನಾಮಕರಣ ಮಾಡುವುದನ್ನು ಆಕ್ಷೇಪಿಸಿ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಸರ್ಕಾರದ ಅನುದಾನಲ್ಲಿ ಕಟ್ಟಲಾದ ಸರ್ಕಾರಿ ಕಟ್ಟಡಗಳಿಗೆ ಜೀವಂತ ರಾಜಕಾರಣಿಗಳ ಹೆಸರು ಇಡಬಾರದು ಎಂದು 2012ರಲ್ಲಿ ಇದೇ ಹೈಕೋರ್ಟ್ ಆದೇಶ ನೀಡಿದೆ.  ಹೈಕೋರ್ಟ್ 2012ರಲ್ಲಿ ನೀಡಿದ ಆದೇಶ ಆಧರಿಸಿ ಹಾಗೂ ಅರ್ಜಿದಾರರು 2023ರ ಜುಲೈ 25ರಂದು ಸಲ್ಲಿಸಿರುವ ಮನವಿಯಂತೆ ಸರ್ಕಾರದ ಅನುದಾನ ದಲ್ಲಿ ಕಟ್ಟಲಾಗಿರುವ ಕಟ್ಟಡಗಳಿಗೆ ಇನ್ನೂ ಜೀವಂತವಾಗಿರುವ ರಾಜಕಾರಣಿಗಳಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್.ಮಲ್ಲಿಕಾರ್ಜುನ ಅವರ ಹೆಸರು ಇಟ್ಟಿರುವುದನ್ನು ತೆರವುಗೊಳಿಸಲು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು.

ಅದೇ ರೀತಿ ದಾವಣಗೆರೆಯಲ್ಲಿ ಸರ್ಕಾರದ ಅನುದಾನದಲ್ಲಿ ಕಟ್ಟಲಾದ ಅನೇಕ ಕಟ್ಟಡಗಳು, ಪಾರ್ಕ್, ಬಸ್ ನಿಲ್ದಾಣ, ರಸ್ತೆಗಳಿಗೆ ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ ಅವರ ಹೆಸರಗಳನ್ನು ಇಡಲಾಗಿತ್ತು. ಇದನ್ನ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಇದೇ ವೇಳೆ ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲಾಧಿಕಾರಿ, ದಾವಣಗೆರೆ ನಗರಸಭೆ, ದಾವಣಗೆರೆ ಜಿಲ್ಲಾ ಪಂಚಾಯಿತಿಗೆ ಸಹ ಹೈಕೋರ್ಟ್ ನೋಟಿಸ್ ಜಾರಿಗೆ ಆದೇಶಿಸಿತು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist