ಬೆಂಗಳೂರು, (www.thenewzmirror.com) :
ಆದಾಯ ಮೀರಿ ಆಸ್ತಿ ಗಳಿಸಿದ್ದ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸಿಬಿಐ ಗೆ ನೀಡಿದ್ದ ಅನುಮತಿಯನ್ನ ವಾಪಾಸ್ ಪಡೆದಿತ್ತು. ಇದನ್ನ ಪ್ರಶ್ನೆ ಮಾಡಿ ಸಲ್ಲಿಕೆಯಾಗಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹಿಂದಿನ ಸರ್ಕಾರ ಸಿಬಿಐಗೆ ನೀಡಿದ್ದಂತ ಅನುಮತಿಯನ್ನ ಈಗಿನ ಸರ್ಕಾರ ಹಿಂಪಡೆದಿದ್ದನ್ನ ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇಂದು ರಾಜ್ಯ ಸರ್ಕಾರ ಹಾಗೂ ಸಿಬಿಐ ನಡುವಿನ ವಿಚಾರ. ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಸೂಕ್ತವೆಂದು ತಿಳಿಸುವ ಮೂಲಕ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.