CRICKET NEWS | ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಮ್ಮ ಮೆಟ್ರೋ.!

ಬೆಂಗಳೂರು (www.thenewzmirror.com):

ಬೆಂಗಳೂರಿನಲ್ಲಿ ನಡೆಯುವ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಆಗಮಿಸುವ ಕ್ರಿಕೆಟ್ ಪ್ರೇಮಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದ್ದು, ಜ.17ರಂದು ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಿದೆ.

RELATED POSTS

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. ಹೀಗಾಗಿ ಬೆಂಗಳೂರು ಮೆಟ್ರೋ ರೇಲ್ ಕಾರ್ಪೋರೇಷನ್‌ ಲಿ. (ಬಿಎಂಆರ್‌ಸಿಎಲ್‌) ನೇರಳೆ ಹಾಗೂ ಹಸಿರು ಮಾರ್ಗದಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ರೈಲು ಸೇವೆಗಳನ್ನು ರಾತ್ರಿ 11.45 ಗಂಟೆಯವರೆಗೆ ವಿಸ್ತರಿಸಿದೆ.

ಪ್ರಯಾಣಿಕರ ಅನೂಕೂಲಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ದಿನಾಂಕ 17ನೇ ಜನವರಿ 2024 ಬುಧವಾರ ಮಧ್ಯಾಹ್ನ 2.00 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರಲಿದೆ. ಕಾಗದದ ಟಿಕೆಟ್‌ಗಳು ರಾತ್ರಿ 8.00 ಗಂಟೆಯಿಂದ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತ್ರತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತ ವಾಗಿರುತ್ತದೆ.

ಪಂದ್ಯದ ದಿನದಂದು 50 ರೂ. ಮೊತ್ತದ ಪೇಪರ್ ಟಿಕೆಟ್ ಜೊತೆಗೆ, ಸಾಮಾನ್ಯ ದರದಲ್ಲಿ ಶೇ.5 ರಿಯಾಯಿತಿಯೊಂದಿಗೆ ಕ್ಯೂಆರ್ ಕೋಡ್ ಟಿಕೆಟ್‌ಗಳು, ಪಂದ್ಯದ ದಿನದಂದು ಖರೀದಿಸಿದರೆ ಇಡೀ ದಿನಕ್ಕೆ ಮಾನ್ಯವಾಗಿರುತ್ತದೆ. ಅನೂಕೂಲಕರ ಪ್ರಯಾಣಕ್ಕಾಗಿ ಕ್ರಿಕೆಟ್ ಪಂದ್ಯದ ಆರಂಭಕ್ಕೆ WattsApp/ Namma Metro App/ Pay TMನಲ್ಲಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಸ್ಮಾರ್ಟ್ ಕಾರ್ಡ್‌ಗಳು ಮತ್ತು NCMC ಕಾರ್ಡ್ ಗಳನ್ನು ಸಹ ಎಂದಿನಂತೆ ಬಳಸಬಹುದು.

ವಿಸ್ತ್ರತ ಸಮಯದಲ್ಲಿ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಪೇಪರ್ ಟಿಕೆಟ್‌ಗಳನ್ನು ಮಾತ್ರ ಅನುಮತಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಬಿಎಂಆರ್ ಸಿಎಲ್ ಕೋರಿಕೊಂಡಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist