ಬೆಂಗಳೂರು, (www.thenewzmirror.com) ;
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಡಿ ಗ್ಯಾಂಗ್ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ನಟ ದರ್ಶನ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಹೈ ಕೋರ್ಟ್ ಗೆ ಸಲ್ಲಿಕೆಯಾಗಿರೋ ರಿಟ್ ಅರ್ಜಿಯಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿದೆ.
ಇಂದು ಅಥವಾ ನಾಳೆ ಆರೋಪಿಗಳ ಪರ ವಕೀಲರಿಗೆ ಚಾರ್ಜ್ ಶೀಟ್ ಪ್ರತಿ ಸಿಗಲಿದ್ದು, ಚಾರ್ಜ್ ಶೀಟ್ ನೋಡಿದ ಬಳಿಕ ಜಾಮೀನು ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗುವುದು ಎಂದು ಹೇಳಲಾಗುತ್ತಿದೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಎಸ್ ಪಿಪಿ ಮೂಲಕ ಕೋರ್ಟ್ ಗೆ 231 ಸಾಕ್ಷಿದಾರರನ್ನು ಒಳಗೊಂಡ 3991 ಪುಟಗಳುಳ್ಳ 9 ಸಂಪುಟಗಳ 10 ಕಡತಗಳನ್ನು ಒಳಗೊಂಡಿದೆ ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ್ರು.