ಡಿಸಿಇಟಿ: ಜೂ.10ರಿಂದ 13ರವರೆಗೆ ದಾಖಲಾತಿ ಪರಿಶೀಲನೆ

RELATED POSTS

ಬೆಂಗಳೂರು(www.thenewzmirror.com): ಮೂರನೇ ಸೆಮಿಸ್ಟರ್ ಅಥವಾ ಎರಡನೇ ವರ್ಷದ ಎಂಜಿನಿಯರಿಂಗ್ ಕೋರ್ಸುಗಳ ನೇರ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಜೂ.10ರಿಂದ 13ರವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರಾಂಕ್ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ದಾಖಲಾತಿ ಪರಿಶೀಲನೆ ನಡೆಯುವ 37 ಕಾಲೇಜುಗಳ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮಗೆ ಹತ್ತಿರ ಇರುವ ಯಾವುದಾದರೊಂದು ಕಾಲೇಜಿಗೆ ಖುದ್ದು ಹೋಗಬೇಕು. ಇದಕ್ಕೂ ಮೊದಲು ಅಭ್ಯರ್ಥಿಗಳು ಮುಂಗಡವಾಗಿ ದಿನಾಂಕ ನಿಗದಿ ಮಾಡಿಕೊಂಡು ಹೋಗಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆನ್ ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ವಿಶೇಷ ಪ್ರವರ್ಗದ (ಎನ್ ಸಿಸಿ, ಕ್ರೀಡೆ, ಸೈನಿಕರು, ಮಾಜಿ ಸೈನಿಕರು, ಸಿಎಪಿಎಫ್, ಮಾಜಿ-ಸಿಎಪಿಎಫ್- ಕ್ಲೇಮ್ ಮಾಡಿದ್ದಲ್ಲಿ ಮಾತ್ರ ಅರ್ಹತೆ) ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ಅವರು ವಿವರಿಸಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist