ಬೆಂಗಳೂರು, (www.thenewzmirror.com);
ಕೇಂದ್ರ ಸಚಿವರಾಗಿದ್ದರೂ ಇವರಿಗೆ ಕರ್ನಾಟಕದಲ್ಲಿ ಇಲ್ಲ ಕಚೇರಿ, ಉದ್ಘಾಟನೆಗೆ ಸಿದ್ದವಾಗಿದ್ದ ಕಚೇರಿಯನ್ನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಾಪಾಸ್ ಪಡೆದಿದ್ದಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.
ಹೌದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿ ವಾಪಾಸ್ ಪಡೆದಿದ್ದು, ಸೋಮಣ್ಣ ಅವರಿಗೆ ಸದ್ಯಕ್ಕೆ ಕಚೇರಿಯೇ ಇಲ್ಲದಂತಾಗಿದೆ.
ತುಮಕೂರಿನ ರೈಲ್ವೆ ನಿಲ್ದಾಣ ಬಳಿ ಇರುವ ಹಳೆಯ ಪರಿವೀಕ್ಷಣಾ ಮಂದಿರವನ್ನ ಸೋಮಣ್ಣ ಅವರಿಗೆ ಸರ್ಕಾರ ನೀಡಿತ್ತು. ಅದೇ ರೀತಿ ಇದೇ ಭಾನುವಾರದಂದು ಅಂದರೆ ಆಗಸ್ಟ್ 18 ರಂದು ಉದ್ಘಾಟನೆಗೆ ಸಿದ್ಧತೆನೂ ಮಾಡಿಕೊಳ್ಳಲಾಗಿತ್ತು. ಸೋಮಣ್ಣ ಅವರು ನೂತನ ಕಚೇರಿಯಲ್ಲಿ ಟೇಬಲ್ ಹಾಗೂ ಕುರ್ಚಿಗಳನ್ನು ಹಾಕಿಸಿದ್ದಲ್ಲದೆ ವಿ.ಸೋಮಣ್ಣ, ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರು ಭಾರತ ಸರ್ಕಾರ ಲೋಕಸಭಾ ಸದಸ್ಯರ ಕಚೇರಿ, ತುಮಕೂರು ಎಂದು ನಾಮಫಲಕ ಕೂಡ ಹಾಕಲಾಗಿತ್ತು. ಆದರೆ ಯಾವುದೇ ಕಾರಣ ನೀಡದ ಸರ್ಕಾರ ಉದ್ಘಾಟನೆಗೆ ಸಿದ್ಧವಾಗಿದ್ದ ಕಚೇರಿ ವಾಪಸ್ ಪಡೆದಿದೆ.
ಕಚೇರಿ ಉಪಯೋಗಕ್ಕೆ ನೀಡಿದ ಅನುಮೋದನೆ ಕೂಡಲೇ ಹಿಂಪಡೆಯಲಾಗಿರುವ ಬಗ್ಗೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿ, ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜಶೇಖರ ಸೂಚಿಸಿದ್ದಾರೆ. ಸರ್ಕಾರದ ನಡೆಗೆ ತುಮಕೂರು ನಗರ ಬಿಜೆಪಿ ಶಾಸಕ ಜಿ.ಬಿ ಜ್ಯೋತಿ ಗಣೇಶ್ ಕಿಡಿಕಾರಿದ್ದು, ಸರ್ಕಾರದ ನಡೆ ವಿರುದ್ಧ ಗರಂ ಆಗಿದ್ದಾರೆ. ಅಷ್ಟೇ ಅಲ್ದೆ ಯಾವುದೇ ಕಾರಣಕ್ಕೂ ಈ ಜಾಗ ಬಿಟ್ಟು ಕೊಡುವುದಿಲ್ಲ ಅಂತ ಪಟ್ಟು ಹಿಡಿದಿದ್ದಾರೆ.