ಧನುಷ್-ಶಿವಣ್ಣ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಎಂಟ್ರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು, (www.thenewzmirror.com);

ತಮಿಳು ನಟ ಧನುಷ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಬಹಳ ಸದ್ದು ಮಾಡ್ತಿದೆ. ರಜನಿಕಾಂತ್ ಜೈಲರ್ ನಲ್ಲಿ ನರಸಿಂಹ ಆಗಿ ದರ್ಶನ ಕೊಟ್ಟು ಕ್ರೇಜ್ ಕ್ರಿಯೇಟ್ ಮಾಡಿದ್ದ ಟಗರು ಶಿವನ ಹೊಸ ಅವತಾರ ನೋಡೋದಿಕ್ಕೆ ಫ್ಯಾನ್ಸ್ ಕಾತುರರಾಗಿದ್ದಾರೆ. ಇತ್ತ ಧನುಷ್ 49ನೇ ಚಿತ್ರ ಇದಾಗಿದ್ದು, ಹೀಗಾಗಿ ಸಹಜವಾಗಿ ನಿರೀಕ್ಷೆ ಹೆಚ್ಚಿದೆ. ಸದ್ಯ ಕ್ಯಾಪ್ಟನ್ ಮಿಲ್ಲರ್ ಬಿಡುಗಡೆಗೆ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದೆ.

RELATED POSTS

ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.ಪೊಂಗಲ್ ಹಬ್ಬದ ಸ್ಪೆಷಲ್ ಆಗಿ ಧನುಷ್-ಶಿವಣ್ಣ ಸಿನಿಮಾ ತೆರೆಗೆ ಬರಲಿದೆ. 2024, ಜನವರಿ 12ರಂದು ‘ಕ್ಯಾಪ್ಟನ್ ಮಿಲ್ಲರ್’ ವಿಶ್ವದಾದ್ಯಂತ ತೆರೆ ಕಾಣಲಿದೆ.  ಈ ಚಿತ್ರವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಧನುಷ್ ಜೋಡಿಯಾಗಿ ಪ್ರಿಯಾಂಕಾ ಮೋಹನನ್ ನಟಿಸಿದ್ದಾರೆ. ಇದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತೆರೆದುಕೊಳ್ಳುವ ಕಥೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ರಿಲೀಸ್ ಆಗಿರೋ ಟೀಸರ್ ಸಿನಿಪ್ರಿಯರಿಗೆ ಕಿಕ್ ಕೊಟ್ಟಿದೆ. ಧನುಷ್ ಉದ್ದ ಕೂದಲು, ಗಡ್ಡ ಮೀಸೆ ಬಿಟ್ಟು ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಾರೆ. ಹಾಗೇ ಶಿವರಾಜ್‌ಕುಮಾರ್ ಕೂಡ ಕುದುರೆ ಏರಿ ಬರುವ ಸನ್ನಿವೇಶ ಅವರ ಅಭಿಮಾನಿಗಳಿಗೆ ಥ್ರಿಲ್ ಹೆಚ್ಚಿಸಿದೆ. ಸದ್ಯ ಈ ಸಿನಿಮಾಗೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಜಿವಿ ಪ್ರಕಾಶ್ ಈ ಸಿನಿಮಾಗೆ ಹಿನ್ನೆಲೆ ಸಂಗೀತ ಹಾಗೂ ಟ್ಯೂನ್‌ಗಳನ್ನು ಕಂಪೋಸ್ ಮಾಡಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist