ಬೆಂಗಳೂರು, (www.thenewzmirror.com) ;
ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ಎಲ್ಲಾ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ಕಾಲೇಜು, ರಾಮನಗರ ಸ್ನಾತಕೋತ್ತರ ಕೇಂದ್ರ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ಲಭ್ಯವಿರುವ ಸ್ನಾತಕೋತ್ತರ ಪದವಿ ಕೋರ್ಸುಗಳ (PG Courses) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ? ಯಾವೆಲ್ಲ ವಿಭಾಗಗಳಿಗೆ ಅಡ್ಮಿಶನ್ (Admission) ನಡೆಯಲಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.
ಯಾವೆಲ್ಲ ಕೋರ್ಸ್‌ಗಳು?
ಕಲಾ, ವಾಣಿಜ್ಯ, ವಿಜ್ಞಾನ, ಹಣಕಾಸು ಮತ್ತು ಶಿಕ್ಷಣ ವಿಭಾಗಗಳಲ್ಲಿ ಲಭ್ಯವಿರುವ ಕೋರ್ಸುಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಇಲಾಖೆಯ https://uucms. karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಆಗಸ್ಟ್ 23ರಿಂದ ಸೆ. 2ರವರೆಗೆ (ದಂಡ ಶುಲ್ಕವಿಲ್ಲದೆ) ಅವಕಾಶ ನೀಡಲಾಗಿದೆ. ಇನ್ನು ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 4 ಕೊನೆಯ ದಿನವಾಗಿದೆ. ಸಲ್ಲಿಸಿದ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಸಂಬಂಧಿಸಿದ ದಾಖಲೆಗಳನ್ನು ದೃಢೀಕರಣದೊಂದಿಗೆ ಆಯಾ ವಿಭಾಗಗಳಿಗೆ ಸೆಪ್ಟಂಬರ್ 5 ರೊಳಗೆ ಸಲ್ಲಿಸಬೇಕು.