ಬೆಂಗಳೂರು, (www.thenewzmirror.com);
ರಾಜ್ಯದ ಕಾಲೇಜುಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಯುಜಿನೀಟ್- 2024ರ ಫಲಿತಾಂಶ ಪ್ರಕಟಣೆ ನಂತರ ಮೂರು ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಂಜಿನಿಯರಿಂಗ್, ಆರ್ಕಿಟೆಕ್ಚರ್ ಹಾಗೂ ಮೇಲೆ ಹೆಸರಿಸಿದ ಕೋರ್ಸುಗಳು ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸುಗಳ ಸೀಟು ಹಂಚಿಕೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಸಾಮಾನ್ಯವಾಗಿರುತ್ತದೆ. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿ ಅರ್ಜಿ ಶುಲ್ಕ ಪಾವತಿಸುವುದು ಕಡ್ಡಾಯ ಎಂದು ಅವರು ವಿವರಿಸಿದ್ದಾರೆ.
ಈ ಕೋರ್ಸುಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವ ದಿನಾಂಕಗಳ ವಿವರಗಳಿಗಾಗಿ ಅಭ್ಯರ್ಥಿಗಳು ಆಗಿಂದ್ದಾಗ್ಗೆ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬೇಕೆಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.