ಬೆಂಗಳೂರು, (www.thenewzmirror.com) ;
ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ ಹೇಳಿ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಲೆ. ಅವರು ಸತ್ಯ ಹರಿಶ್ಚಂದ್ರನ ಮೊಮ್ಮಗ. ನಾನೇನು ಎನ್ನುವುದು ಜನಕ್ಕೆ ಗೊತ್ತಿದೆ. ನಾನು ಕಂಡಿತವಾಗಿಯೂ ಸತ್ಯ ಹರಿಶ್ಚಂದ್ರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದರು.
ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆಶಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಕೂಪನ್ ಕಾರ್ಡ್ ಗಳನ್ನು ಹಂಚುತ್ತಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದ್ದಕ್ಕೆ ಕಿಡಿಕಾರಿದ್ರು. ಮುನಿರತ್ನ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಹಂಚುತ್ತಿದ್ದಾರೆ. ನಾವು ಹಂಚುತ್ತಿರುವುದು ನಮ್ಮ ಪ್ರಣಾಳಿಕೆ ಕಾರ್ಡ್” ಎಂದರು.
10 ಸಾವಿರ ಮೌಲ್ಯದ ಕೂಪನ್ ಕಾರ್ಡ್ ನೀಡಲಾಗುತ್ತಿದೆ ಎಂದು ಮರು ಪ್ರಶ್ನಿಸಿದಾಗ “ಇಷ್ಟಾದರೂ ಭಯ ಬಂದಿದೆಯಲ್ಲ. ಹೆದರಿಕೊಂಡು ರಣ ಹೇಡಿತರ ಬೇರೆ ಕಡೆ ಹೋಗಿದ್ದಾರೆ. ಅವರೇ ಚುನಾವಣೆಗೆ ನಿಂತುಕೊಳ್ಳಬೇಕಿತ್ತು. ಅಮಾಯಕರನ್ನು ನಿಲ್ಲಿಸಿ ಮಂಡ್ಯಕ್ಕೆ ಓಡಿ ಹೋಗಿದ್ದಾರೆ. ಕುಮಾರಸ್ವಾಮಿ ಏನೇನು ಮಾಡುತ್ತಿದ್ದಾರೆ, ಏನೇನು ಹಂಚುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲವೇ? ಮುನಿರತ್ನನ ಮೂಲಕ ಗೋಲ್ಡ್ ಕಾರ್ಡ್ ಮಾಡಿ ಹಂಚುತ್ತಿದ್ದಾರೆ. ಸಿನಿಮಾ ಸ್ಟೈಲ್ ಅಲ್ಲಿ ಮಾಡಿದ್ದಾರೆ. ಅವರೇಕೆ ಇಷ್ಟೊಂದು ಹತಾಶರಾಗಿದ್ದಾರೆ ಎಂದು ಕಿಡಿಕಾರಿದ್ರು.
ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿ, ಹೆಣ್ಣು ಮಕ್ಕಳನ್ನು ಅಗೌರವದಿಂದ ಕಂಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಕರ್ಮಕಾಂಡ ತೋರಿಸುತ್ತಿದ್ದರು. ಇದರ ವಿರುದ್ಧಹೊಸ ಕಾನೂನು ಮಾಡಬೇಕು ಎಂದು ಯಾರೋ ಹೇಳುತ್ತಿರುವುದನ್ನು ನಾನು ಕೇಳಿದೆ ಎಂದರು. ಸಂಸದನೊಬ್ಬ ಹೆಣ್ಣುಮಕ್ಕಳ ಜೊತೆ ಅಗೌರವದಿಂದ ನಡೆದುಕೊಂಡಿದ್ದಾರೆ ಎಂದಾಗ “ಇದರ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ಡಾ.ಮಂಜುನಾಥ್, ರೇವಣ್ಣ ಅವರನ್ನು ಕೇಳಿ. ನಾನು ಉತ್ತರ ಕೊಡಲು ಆಗುವುದಿಲ್ಲ. ಅವರ ಆಚಾರ ವಿಚಾರ ಎಲ್ಲವೂ ಅವರೇ. ನನಗೆ ಇದನ್ನು ನೋಡಿ ಅವಮಾನವಾಗುತ್ತಿದೆ” ಎಂದರು.
ಕೆಪಿಸಿಸಿ ಅಧ್ಯಕ್ಷರು ಬುದ್ದಿವಂತರೇ, ಅವರು ಏನು ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ “ನಾವು ಮಾಡಿರುವುದಕ್ಕೆ, ಮಾಡುತ್ತೇವೆ ಎಂದು ಹೇಳಿದ್ದಕ್ಕೆ ಜನ ಈಚೆ ಬಂದು ನಮಗೆ 136 ಸ್ಥಾನ ಕೊಟ್ಟಿದ್ದಾರೆ. ನೀನೇನು ಮಾಡಲಿಲ್ಲ ಅದಕ್ಕೆ ಜನ 18 ಸ್ಥಾನಗಳನ್ನು ಕೊಟ್ಟಿರುವುದು” ಎಂದು ವಾಗ್ದಾಳಿ ನಡೆಸಿದರು.