ಬೆಂಗಳೂರು, (www.thenewzmirror.com) ;
ರಾಜ್ಯದಲ್ಲಿ ಮೊದಲ ಹಂತದ ಮತದಾನ ಭರದಿಂದ ಸಾಗುತ್ತಿದೆ. ಇದರ ಬೆನ್ನಲ್ಲೇ ಎರಡನೇ ಹಂತದಲ್ಲಿ ಮತದಾನ ನಡೆಯುವ ರಾಜ್ಯದ ಉಳಿದ ಹದಿನಾಲ್ಕು ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಕನ್ನಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆಕೊಟ್ಟಿದ್ದಾರೆ.
ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಇರದ ನಡುವೆನೇ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರು ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಲೋಕಸಭೆಯ ಎರಡನೇ ಹಂತದ ಚುನಾವಣೆಯಲ್ಲಿ ಕರ್ನಾಟಕ, ಕೇರಳ ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಂದು ಚುನಾವಣೆ ನಡೆಯುತ್ತಿರುವ ರಾಜ್ಯಗಳ ಮತದಾರರಿಗೆ ಪ್ರಧಾನಿ ಮೋದಿ ಅವರು ಅಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದ್ದು, ಜತೆಗೆ ಕರ್ನಾಟಕದ ಮತದಾರರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕನ್ನಡದಲ್ಲಿ ಪೋಸ್ಟ್ ಮಾಡಿದ್ದಾರೆ.