Election War | ರಾಹುಲ್ ಗಾಂಧಿಗೆ ಬೆಂಗಳೂರಿನ ಕೋರ್ಟ್ ನಲ್ಲಿ ಜಾಮೀನು.! ರಾಹುಲ್ ಗೂ ಬೆಂಗಳೂರಿಗೂ ಏನು ಸಂಬಂಧ‌? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.!

ಬೆಂಗಳೂರು,(www.thenewzmirror.com) ;

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಷರತ್ತು ಬದ್ದ ಜಾಮೀನು ನೀಡಿದೆ. ಅರೇ ರಾಹುಲ್ ಗಾಂಧಿಗೆ ಬೆಂಗಳೂರಿನ ಕೋರ್ಟ್ ಯಾಕೆ ಜಾಮೀನು ಕೊಡ್ತು ಅನ್ನೋ ಪ್ರಶ್ನೆ ಉದ್ಭವಿಸೋದು ಸಾಮಾನ್ಯ. ಅದಕ್ಕೆ ಉತ್ತರ ಇಲ್ಲಿದೆ.

RELATED POSTS

ಭ್ರಷ್ಟಾಚಾರ ಕುರಿತಂತೆ ದಿನಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದಿದ್ದ ಆರೋಪದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ‌ ಹಾಗೂ ಡಿಸಿಎಂ ಗೆ ಜಾಮೀನು ಸಿಕ್ಕಿತ್ತು.

ಇಂದು ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿಗೆ ಶರತ್ತು‌ಬದ್ದ ಜಾಮೀನು ನೀಡಿದ್ದು, ಜೊತೆಗೆ ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ  ಮುಂದೂಡಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಅವರು 75 ಲಕ್ಷ ಮೌಲ್ಯದ ಆಸ್ತಿದ ದಾಖಲೆಯನ್ನ ಶ್ಯೂರಿಟಿ ಆಗಿ ನೀಡಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಕೋರ್ಟ್‌ಗೆ  ಖುದ್ದು ಹಾಜರಾಗಲು ಕೋರ್ಟ್ ಸೂಚನೆ ಕೊಟ್ಟಿತ್ತು. ಅದರಂತೆ ರಾಹುಲ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಜೂ.1ರಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.ರಾಹುಲ್‌ಗಾಂಧಿ 3ನೇ ಸಮನ್ಸ್‌ಗೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ  ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಧೀಶರು ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದ್ದರು. ಇಂದು ವಿಚಾರಣೆಗೆ ಹಾಜರಾದ ರಾಹುಲ್ ಗೆ ಕೋರ್ಟ್ ಕಂಡೀಷನಲ್ ಬೇಲ್ ನೀಡಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist