Exam postponed | 5, 8 ಮತ್ತು 9ನೇ ತರಗತಿಗಳ ಬೋರ್ಡ್‌ ಪರೀಕ್ಷೆಗೆ ಸುಪ್ರೀಂ ತಡೆ, ಪರೀಕ್ಷೆ ಮುಂದೂಡಿದ ಪರೀಕ್ಷಾ ಮಂಡಳಿ

ಬೆಂಗಳೂರು, (www.thenewzmirror.com) :

5, 8 ಮತ್ತು 9ನೇ ತರಗತಿಗಳ ಬೋರ್ಡ್‌ ಪರೀಕ್ಷೆಗೆ ಸುಪ್ರೀಂ ತಡೆ ನೀಡಿದೆ. ಹೀಗಾಗಿ ರಾಜ್ಯಾದ್ಯಂತ‌ ನಡೆಯಬೇಕಿದ್ದ  ಪರೀಕ್ಷೆಗಳನ್ನ ಪರೀಕ್ಷಾ ಮಂಡಳಿ ಮುಂದೂಡಿದೆ.

RELATED POSTS

ರಾಜ್ಯಾದ್ಯಂತ ಮಂಗಳವಾರ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದಿತ್ತು. ಇದರ ಬೆನ್ನಲೇ ಖಾಸಗಿ ಶಿಕ್ಷಣ ಸಂಸ್ಥೆಗಳು 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಸುಪ್ರೀಂ ಮೆಟ್ಟಿಲೇರಿದ್ದವು. ಖಾಸಗಿ ಶಾಲೆಗಳ ಮನವಿಗೆ ಪುರಸ್ಕರಿಸಿದ ಸುಪ್ರೀಂ ತಡೆ ನೀಡಿದೆ.

ಸುಪ್ರೀಂಕೋರ್ಟ್‌ ಆದೇಶದ ಬೆನ್ನಲ್ಲೇ 5, 8 ಮತ್ತು 9ನೇ ತರಗತಿಯ ಬೋರ್ಡ್‌ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದೂಡಿರುವುದಾಗಿ ಸುತ್ತೋಲೆ ಹೊರಡಿಸಿದೆ.

5,8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್‌ ಪರೀಕ್ಷೆಗಳನ್ನು ನಡೆಸದಂತೆ ನ್ಯಾಯಮೂರ್ತಿಗಳಾದ ಬೆಲಾ ಎಂ ತ್ರಿವೇದಿ ಮತ್ತು ಪಂಕಜ್‌ ಮಿಥಾಲ್‌ ಅವರನ್ನೊಳಗೊಂಡ ಪೀಠ ತಡೆ ನೀಡಿದೆ.

ಬೋರ್ಡ್‌ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್‌ ನ ಏಕಸದಸ್ಯ ನ್ಯಾಯಪೀಠ ಮೌಲ್ಯಾಂಕನ ಪರೀಕ್ಷೆಯನ್ನು ರದ್ದುಪಡಿಸಿ ಆದೇಶ ನೀಡಿತ್ತು. ಆದರೆ ಹೈಕೋರ್ಟ್‌ ದ್ವಿಸದಸ್ಯ ಪೀಠ ಪರೀಕ್ಷೆಗೆ ಅವಕಾಶ ನೀಡಿ ತೀರ್ಪು ನೀಡಿತ್ತು. ಈ ನಿಟ್ಟಿನಲ್ಲಿ ಹೈಕೋರ್ಟ್‌ ನ ದ್ವಿಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist