ಸುಪ್ರೀಂಕೋರ್ಟ್​ನ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ

ಬೆಂಗಳೂರು,(www.thenewzmirror.com) :

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಸಂವಿಧಾನ ತಜ್ಞ ಎಂದು ಕರೆಸಿಕೊಳ್ಳುತ್ತಿದ್ದ ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದರು.

RELATED POSTS

ನಾರಿಮನ್ ಜನವರಿ 10, 1929 ರಂದು ಮ್ಯಾನ್ಮಾರ್‌ನಲ್ಲಿ ಪಾರ್ಸಿ ಕುಟುಂಬದಲ್ಲಿ ಜನಿಸಿದ್ದರು. ಬಾಂಬೆ ಹೈಕೋರ್ಟ್‌ನಲ್ಲಿ ತಮ್ಮ ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದರು. ಅವರ ಪುತ್ರ ರೋಹಿಂಟನ್ ನಾರಿಮನ್ ಕೂಡ ಹಿರಿಯ ವಕೀಲರಾಗಿದ್ದು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಯಾಗಿದ್ದಾರೆ.

ನಾರಿಮನ್ ನವೆಂಬರ್ 1950ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಅವರು ಎಎಎಸ್​ಜಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ದೇಶವು ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿತು. ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ದೇಶವು ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿತು. 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದಲ್ಲದೆ ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಸುದೀರ್ಘ ಕಾನೂನು ವೃತ್ತಿ ಜೀವನದಲ್ಲಿ ನಾರಿಮನ್ ಅವರು ಅನೇಕ ದೊಡ್ಡ ಐತಿಹಾಸಿಕ ಪ್ರಕರಣಗಳ ಭಾಗವಾಗಿದ್ದಾರೆ. 1975ರಲ್ಲಿ ಘೋಷಿಸಲಾದ ತುರ್ತು ಪರಿಸ್ಥಿತಿ ಸರ್ಕಾರದ ನಿರ್ಧಾರದಿಂದ ನಾರಿಮನ್ ಸಂತೋಷವಾಗಿರಲಿಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರ ತೆಗೆದುಕೊಂಡ ತುರ್ತು ನಿರ್ಧಾರವನ್ನು ವಿರೋಧಿಸಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಕಾವೇರಿ ಜಲವಿವಾದ ಸಂದರ್ಭದಲ್ಲಿ ಕರ್ನಾಟಕದ ಪರ ವಾದ ಮಂಡಿಸುತ್ತಿದ್ದ ಇವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತಾರಾಜ್ಯ ನದಿ ನೀರು ಹಂಚಿಕೆಯ ಎಲ್ಲ ವ್ಯಾಜ್ಯಗಳಲ್ಲಿ ರಾಜ್ಯದ ಪರ ವಾದಿಸುತ್ತಿದ್ದ ಇವರಿಗೆ ಅಂತಾರಾಷ್ಟ್ರೀಯ ಜಲತಜ್ಞರೆಂಬ ಖ್ಯಾತಿಯೂ ಬಂದಿತ್ತು

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist