ಮಂಗಳೂರು(thenewzmirror.com): ಕ್ಷೇತ್ರ ಮರುವಿಂಗಡಣೆ ಮೂಲಕ”ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿದೆ ಆದರೆ ಈಗಿನ ಜನಸಂಖ್ಯೆ ಆಧರಿಸಿ “ಕೇಂದ್ರ ಸರ್ಕಾರ ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ. ಇದು ಸರಿಯಲ್ಲ. ಇದರ ವಿರುದ್ಧ ಚುನಾವಣಾ ಆಯೋಗ, ನ್ಯಾಯಾಲಯಗಳ ಮೂಲಕ ನಾವು ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ದಕ್ಷಿಣ ಭಾರತದ ರಾಜ್ಯಗಳ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲ್ಲ, ಯಾವ ರಾಜ್ಯಕ್ಕೂ ಅನ್ಯಾಯವಾಗಲು ಬಿಡಲ್ಲ ಎಂದಿದ್ದಾರೆ ಅವರ ಈ ಹೇಳಿಕೆಯೂ ಅನುಮಾನ ಮೂಡುವಂತೆ ಮಾಡಿದೆ, ಕೇಂದ್ರದ ಈ ನಿರ್ಧಾರದ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದರು.