ಬೆಂಗಳೂರು,(www.thenewzmirror.com);
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ. ಇಂದು ಹಾಗೂ ನಾಳೆ ನಡೆಯುತ್ತಿರುವ ಕರಾವಳಿಯ ಕಂಬಳ ನಡೆಯಲಿದ್ದು, ಕರಾವಳಿಯ ಜಾನಪದ ಕ್ರೀಡೆಯ ಕಣ್ತುಂಬಿ ಕೊಳ್ಳಲು ಕೌಂಟ್ ಡೌನ್ ಶುರುವಾಗಿದೆ.
ಅರಮನೆ ಮೈದಾನ ಜೋಡಿ ಕೋಣಗಳ ಮಿಂಚಿನ ಓಟಕ್ಕೆ ಸಾಕ್ಷಿ ಸಾಕ್ಷಿಯಾಗಲಿದೆ. ಕರಾವಳಿ ಭಾಗದಲ್ಲಿ ನಡೆಯುತ್ತಿದ್ದ ಕಂಬಳ ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ನಡೆಯುತ್ತಿದ್ದು, ಕಂಬಳದ ಸೊಗಡನ್ನ ಸವಿಯಲು ಸಿಲಿಕಾನ್ ಸಿಟಿ ಮಂದಿ ಕೌತುಕದಿಂದ ಕಾಯುತ್ತಿದ್ದಾರೆ.
ಬೆಳಗ್ಗೆ 10.30 ರ ಹೊತ್ತಿಗೆ ಜೋಡು ಕರೆಯನ್ನ ಅಶ್ವಿನಿ ಪುನೀತ್ ರಾಜಕುಮಾರ್ ಉದ್ಘಾಟನೆ ಮಾಡಲಿದ್ದಾರೆ.
ಬೆಳಗ್ಗೆ 11 ಗಂಟೆ ಸಮಯಕ್ಕೆ ಮಾಜಿ ಸಿಎಂ ಬಿಎಸ್. ಯಡಿಯೂರಪ್ಪ ಸಭಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 12 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆಯನ್ನ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಉದ್ಘಾಟನೆ ಮಾಡಲಿದ್ದಾರೆ.

ಎರಡು ದಿನಗಳ ಕಾಲ ನಡೆಯಲಿರುವ ಕಂಬಳದಲ್ಲಿ ಕೆಲವು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ಮ ಆಯೋಜಿಸಲಾಗಿದೆ.ಮಿಂಚಿನ ಓಟದಲ್ಲಿ ಓಡಿ ಪ್ರಶಸ್ತಿ ಮುಡಿಗೇರಿಸಲು 180ಕ್ಕೂ ಅಧಿಕ ಕೋಣ ಸಜ್ಜುಗೊಂಡಿವೆ.
ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಕಂಬಳ ನಡೆಯುತ್ತಿದ್ದು ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4 ರಲ್ಲಿ ಸಾರ್ವಜನಿಕರಿಗೆ ಎಂಟ್ರಿ ಕಲ್ಪಿಸಲಾಗಿದೆ. ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದ್ದು, ವಿವಿಐಪಿಗಳಳಿಗೆ ಫನ್ ವರ್ಲ್ಡ್ ಕಡೆಯಿಂದ ಪ್ರವೇಶ ಮಾಡಲು ಅವಕಾಶ ನೀಡಲಾಗಿದೆ. ಹಾಗೆನೇ ಕಂಬಳವೀಕ್ಷಣೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಲಾಗಿದ್ದು, ಲಕ್ಷಾಂತರ ಮಂದಿ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ.

ಈ ಕಂಬಳದ ವಿಶೇಷತೆ ಏನು..?
– ಬೆಂಗಳೂರು ಕಂಬಳದಲ್ಲಿ ಕೋಣಗಳ 180-200ಜೋಡಿ ಭಾಗಿಯಾಗೋ ಸಾಧ್ಯತೆ
– ಬೆಂಗಳೂರು ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್ ಕುಮಾರ್ ಹೆಸರು
– ಕಂಬಳದ ಕರೆಗೆ ರಾಜ ಮಹಾರಾಜ ಎಂದು ಹೆಸರು
– ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ
– ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ವೈಭವ
– ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ ಕೂಡ ಇರಲಿದೆ
– ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಟ್ರ್ಯಾಕ್ 147 ಮೀಟರ್ ಉದ್ದ ಇರುತ್ತದೆ
– ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದೆ
– ಇದು ಕಂಬಳದ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಲಿದೆ
– 228 ಕೋಣಗಳ ಜೋಡಿ ರಿಜಿಸ್ಟ್ರೇಷನ್ ಆಗಿದ್ದು 180-200 ಜೋಡಿ ಫೈನಲ್ ಆಗಲಿದೆ
– ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ
– ಆಹಾರ, ನೀರಿನ ಬಗ್ಗೆ ಕೋಣಗಳ ಮಾಲೀಕರಿಂದ ವಿಶೇಷ ಕಾಳಜಿ
– ಕೋಣಗಳಿಗೆ ಬೈಹುಲ್ಲು, ಊರಿನಿಂದಲೇ ತರಲಾಗುತ್ತದೆ
– ಕಂಬಳದ ಸ್ಥಳಕ್ಕೆ ಪಶುವೈದ್ಯರು, ನಾಟಿ ವೈದ್ಯರೂ ಕೂಡ ಬಂದಿದ್ದಾರೆ
ಗೆದ್ದವರಿಗೆ ಏನು ಸಿಗಲಿದೆ.?
– ಗೆದ್ದ ಕೋಣಗಳಿಗೆ ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು
– ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು
– ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ
– ಕಂಬಳ ಓಡಿಸುವವರಿಗೆ ಕೂಡ ವಿಶೇಷ ಬಹುಮಾನ ಇರಲಿದೆ
ಕಂಬಳ ನಡೆಯುವ ಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದ್ದು, ಕರಂಗೋಲು ನೃತ್ಯ, ಯಕ್ಷಗಾನ, ಕಾಲಿವುಡ್ ಸಮಕಾಲೀನ ನೃತ್ಯ, ಹುಲಿ ವೇಷ, ಮಾಂಕಳಿ ನಲಿಕೆ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ.