Flower show | ಲಾಲ್ ಭಾಗ್ ನಲ್ಲಿ 30 ಲಕ್ಷ ಹೂಗಳಿಂದ ನಿರ್ಮಾಣವಾಗಿದೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿಷಯಾಧರಿತ ಫ್ಲವರ್ ಶೋ..!

ಬೆಂಗಳೂರು,  (www.thenewzmirror.com) ;

ಸಸ್ಯಕಾಶಿ ಲಾಲ್ ಭಾಗ್ ನಲ್ಲಿ 30 ಲಕ್ಷ ಹೂಗಳಿಂದ ನಿರ್ಮಾಣವಾಗಿದೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿಷಯಾಧರಿತ ಫ್ಲವರ್ ಶೋಗೆ ಇಂದು ಚಾಲನರ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಂಡ ಫಲಪುಷ್ಪ ಪ್ರದರ್ಶನದಲ್ಲಿ ಸಂವಿಧಾನ ಶಿಲ್ಪ ಡಾ.ಬಿ.ಆರ್. ಅಂಬೇಡ್ಕರ್ ರವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದೆ.

RELATED POSTS

ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಇರಲಿದೆ.

ಫ್ಲವರ್ ಶೋ ಉದ್ಘಾಟಿಸಿ ಮಾತನಾಡಿದ ಸಿಎಂ, ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ತಿಳಿಸಿದರು.

ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು ಎಂದು ಅಭಿಪ್ರಾಯಪಟ್ಟರು.

ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19  ವರೆಗೆ ಏರ್ಪಡಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಇರಲಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist