ಬೆಂಗಳೂರು, (www.thenewzmirror.com) ;
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ನಿನ್ನೆಯಷ್ಟೇ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದರು.
ನಾಗೇಂದ್ರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳನ್ನು ಹಗರಣದಲ್ಲಿ ಬಂದ ಹಣದಿಂದಲೇ ಖರೀದಿಸಲಾಗಿದ್ಯಾ ಅನ್ನೋ ಬಗ್ಗೆ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.
ಇದರ ನಡುವೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪಿಎ ಹರೀಶ್ ಅವರ ವೀಡಿಯೋ ಆಧಾರಿತ ಹೇಳಿಕೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಪಿಎ ಹರೀಶ್ ನೀಡಿದಂತ ಹೇಳಿಕೆಯ ಆಧಾರದ ಮೇಲೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ಬಂಧಿಸಿದ್ದಾರೆ ಎನ್ನಲಾಗಿದೆ.