ಬೆಂಗಳೂರು, ( www.thenewzmirror.com ) ;
ಕಾಂಗ್ರೆಸ್ ಸರ್ಕಾರದ ಮಹತ್ವದ ಚುನಾವಣಾ ಘೋಷಣೆಗಳಲ್ಲಿ ಒಂದಾಗಿದ್ದ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ. ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಲು ಮಹಿಳೆಯರಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ
ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಂಗ್ರೆಸ್, ಚುನಾವಣಾ ಪೂರ್ವ ರಾಜ್ಯದ ಜನತೆಗೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿಗೆ ತರಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡಲು ಬಿಪಿಎಲ್ ಹಾಗೂ ಎಪಿಎಲ್ ಕಾರ್ಡು ಹೊಂದಿರಬೇಕೆಂಬ ಯಾವುದೇ ನಿಯಮ ವಿಧಿಸಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಎಂದರು.
ಇಂದು ನಡೆಸ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ಸಭೆಯಲ್ಲಿ ಈಗಾಗಲೇ ನಾಲ್ಕೂ ನಿಗಮಗಳು ನಷ್ಟದಲ್ಲಿವೆ. ಇಂಥ ಸಮಯದಲ್ಲಿ ಸರ್ಕಾರ ಆರ್ಥಿಕ ಸಹಾಯ ನೀಡಿದರೆ ಯೋಜನೆ ಜಾರಿ ಮಾಡಲು ಅನುಕೂಲವಾಗುತ್ತೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಸಭೆಯಲ್ಲಿ ಚರ್ಚೆಗೆ ಬಂದ ವಿಷಯಗಳನ್ನು ವರದಿ ರೂಪದಲ್ಲಿ ಮುಖ್ಯಮಂತ್ರಿಗಳ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದ ರಾಮಲಿಂಗಾರೆಡ್ಡಿ, ಸಿಎಂ ಈಗಾಗಲೇ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ಮಾತನಾಡಿದ್ದಾರೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಿಎಂಗೆ ವರದಿ ಸಲ್ಲಿಸುತ್ತಾರೆ. ಅದಾದ ಬಳಿಕ ಯೋಜನೆ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದರು.
3200 ಕೋಟಿ ಆರ್ಥಿಕ ಹೊರೆ
ಸದ್ಯ ಸಾರಿಗೆ ನಿಗಮದ ಅಧಿಕಾರಿಗಳು ಕೊಟ್ಟಿರುವ ಮಾಹಿತಿ ಪ್ರಕಾರ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿದ್ದೇ ಆದರೆ ನಾಲ್ಕೂ ನಿಗಮಗಳಿಗೆ ವಾರ್ಷಿಕ 3200 ಕೋಟಿ ಆರ್ಥಿಕ ಹೊರೆ ಬರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
1300 ಬಸ್ ಗಳು ಹೆಚ್ಚುವರಿ ಬೇಕು
ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬರ್ತಾ ಇದ್ದಂತೆ ಸರ್ಕಾರಿ ಬಸ್ ನಲ್ಲಿ ಸಂಚಾರ ಮಾಡೋ ಮಹಿಳಾ ಪ್ರಯಾಣಿಕರ ಸಂಖ್ಯಡ ಕೊಂಚ ಹೆಚ್ಚಾಗಿದೆಯಂತೆ. BMTC, KSRTC, NWKRTC, KKRTC ನಿಗಮಗಳ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡೋಕೆ ಅಂತ ಹೆಚ್ಚುವರಿ ಬಸ್ ಗಳ ಅಗತ್ಯವಿದೆಯಂತೆ ಇದಕ್ಕಾಗಿ 1200 ರಿಂದ 1300 ಬಸ್ ಗಳು ಹೆಚ್ಚುವರಿಯಾಗಿ ಅಗತ್ಯವಿದೆಯಂತೆ. ಹೀಗಂತ ಅಧಿಕಾರಿಗಳು ಮಾಹಿತಿ ನೀಡಿದ್ದು, ಇದನ್ನ ಪೂರೈಸೋಕೆ ಸಾಧ್ಯ ಆಗುತ್ತಾ ಅನ್ನೋದೇ ಕುತೂಹಲ.