ಬೆಂಗಳೂರು, (www.thenewzmirror.com) ;
ಆಹಾರ ಸುರಕ್ಷತೆ ವಿಚಾರದಲ್ಲಿ FSSAI ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಐತಿಹಾಸಿಕ ಕ್ರಮ ಕೈಗೊಂಡಿದೆ. ಇನ್ಮುಂದೆ ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಲ್ಲಿ ಇರುವ ಒಟ್ಟು ಸಕ್ಕರೆ, ಉಪ್ಪು ಮತ್ತು ಸ್ಯಾಚುರೇಟೆಡ್ ಕೊಬ್ಬಿನ ಪೌಷ್ಠಿಕಾಂಶದ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮತ್ತು ದೊಡ್ಡ ಗಾತ್ರದಲ್ಲಿ ಪ್ಯಾಕೆಟ್ನ ಮೇಲೆ ಮುದ್ರಿಸಬೇಕು ಎಂಬ ಆದೇಶ ಹೊರಡಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈ ಹೊಸ ನಿಯಮದಿಂದ ಪ್ಯಾಕೇಜ್ ಮಾಡಿದ ಆಹಾರ ಪದಾರ್ಥಗಳಲ್ಲಿನ ಒಟ್ಟು ಸಕ್ಕರೆ, ಉಪ್ಪು ಮತ್ತು ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವನ್ನು ಪ್ಯಾಕೆಟ್ನ ಮೇಲೆ ದಪ್ಪ ಅಕ್ಷರಗಳಲ್ಲಿ ಮತ್ತು ತುಲನಾತ್ಮಕವಾಗಿ ದೊಡ್ಡ ಫಾಂಟ್ ಗಾತ್ರದಲ್ಲಿ ಮುದ್ರಿಸುವುದು ಕಡ್ಡಾಯ.
ಹೊಸ ತಿದ್ದುಪಡಿಯು, ಗ್ರಾಹಕರು ತಾವು ಸೇವಿಸುವ ಆಹಾರದಲ್ಲಿನ ಪೌಷ್ಠಿಕಾಂಶದ ಮೌಲ್ಯವನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳಲು ಮತ್ತು ಆರೋಗ್ಯಕರ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುವ ಉದ್ದೇಶ ಹೊಂದಿದೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಶಿಫಾರಸು ಮಾಡಲಾದ ಆಹಾರ ಸೇವನೆಗೆ ಅನುಗುಣವಾಗಿ (ಆರ್ಡಿಎ) ಪ್ರತಿ ಸರ್ವ್ನಲ್ಲಿ ಒಟ್ಟು ಸಕ್ಕರೆ, ಒಟ್ಟು ಸ್ಯಾಚುರೇಟೆಡ್ ಕೊಬ್ಬು ಮತ್ತು ಸೋಡಿಯಂ ಅಂಶಗಳ ಶೇಕಡಾವಾರು ಪ್ರಮಾಣವನ್ನು ಪ್ಯಾಕೆಟ್ನ ಮೇಲೆ ದಪ್ಪ ಅಕ್ಷರಗಳಲ್ಲಿ ಮುದ್ರಿಸಲಾಗುವುದು ಎಂದು ಸಚಿವಾಲಯ ಹೇಳಿದೆ.