ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

RELATED POSTS

ಬೆಂಗಳೂರು(thenewzmirror.com):ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ, ಮನವಿ ಸ್ವೀಕರಿಸಿದರು. 

ಈ ವೇಳೆ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಸಲು ಸರ್ಕಾರಕ್ಕೆ ಸಹಾನುಭೂತಿ ಇದೆ.  ವೈಯಕ್ತಿಕವಾಗಿ ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪರ ನಿಲ್ಲುತ್ತೇನೆ ಎಂದು ಅವರು ಭರವಸೆ ನೀಡಿದರು. 

ಬಜೆಟ್‌ನಲ್ಲಿ ಸಮಾಧಾನಕರ:

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನವನ್ನು ಬಜೆಟ್ನಲ್ಲಿ ಹೆಚ್ಚಿಸಲಾಗಿದೆ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ  ಆಗಿದ್ದಾಗಲೇ ವೇತನ ಹೆಚ್ಚಿಸಲಾಗಿತ್ತು. ಈಗಲೂ  ಸಿದ್ದರಾಮಯ್ಯನನವರೇ  ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಗೌರವಧನ ಏರಿಕೆಯಾಗುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.

ನಾಳೆ ಗ್ರ್ಯಾಚುಯಿಟಿ ವಿತರಣೆ:

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ನಾಳೆ (ಮಾರ್ಚ್ 8) ಸಾಮೂಹಿಕವಾಗಿ ಗ್ರ್ಯಾಚುಯಿಟಿ ವಿತರಿಸಲಾಗುವುದು ಎಂದು ಹೇಳಿದ ಸಚಿವರು, ನಿವೃತ್ತಿಯಾದವರಿಗೆ ಇಡಿಗಂಟು ಹಣ ನೀಡುವುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸುವ ಯೋಚನೆಯಿದೆ.  ಈ ಮೂಲಕ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ  ಸಹಾಯವಾಗಲಿದೆ. ಈ ಬಗ್ಗೆ  ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಪ್ರಚಾರ ಕೈಗೊಳ್ಳಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ವೇಳೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮೀ, ಕಾರ್ಯಾಧ್ಯಕ್ಷೆ ಶಾಂತಾ ಎಸ್. ಘಂಟಿ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ, ಖಜಾಂಚಿ ಕಮಲಾ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist