ಬೆಂಗಳೂರು,(www.thenewzmirror.com);
ಏರ್ಪೋರ್ಟ್ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದಿದ್ದ ನಟಿ ರನ್ಯಾರಾವ್ಮನೆ ಮೇಲೆ ED(ಜಾರಿ ನಿರ್ದೇಶನಾಲಯ) ದಾಳಿ ನಡೆಸಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟಿ ರನ್ಯಾರಾವ್ವಿಚಾರಣೆ ಎದುರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ.


ಮೂಲಗಳ ಪ್ರಕಾರ ಬೆಂಗಳೂರಿನ ಕೋರಮಂಗಲ, ಇಂದಿರಾನಗರ ಸೇರಿದಂತೆ 8 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ ಪರಿಶೀಲಿಸಿದ್ದಾರೆ.ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಸಿಲುಕಿ ನಟಿ ರನ್ಯಾರಾವ್ ನ್ಯಾಯಾಂಗ ಬಂಧನದಲ್ಲಿದ್ದು ಇದೀಗ ಪ್ರಕರಣ ಸಂಬಂಧ ರನ್ಯಾರಾವ್ ಮತ್ತು ಪತಿ ಜತಿನ್ ಗೆ ಸೇರಿದ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂಪರ ಹೋರಾಟಗಾರ ತೇಜಸ್ ಗೌಡ ಬುಧವಾರ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.