Good news| ರೈತರಿಗೆ ಗುಡ್ ನ್ಯೂಸ್: ಎಂಎಸ್ಪಿ ದರದಲ್ಲಿ ರಾಗಿ,ಜೋಳ,ಭತ್ತ ಖರೀದಿಗೆ ಸರ್ಕಾರದ ಸೂಚನೆ

RELATED POSTS

ಬೆಂಗಳೂರು( thenewzmirror.com): ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ(MSP) ರೈತರಿಂದ ರಾಗಿ ,ಜೋಳ, ಭತ್ತ ಖರೀದಿಸಿ ಸಕಾಲದಲ್ಲಿ ರೈತರಿಗೆ ಹಣ ಪಾವತಿ ಮಾಡುವಂತೆ ಜಿಲ್ಲಾಡಳಿತಗಳಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೂಚಿಸಿದ್ದಾರೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು,ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನಸ್ಸಿ ಮುಖ್ಯಸ್ಥರೊಂದಿಗೆ ವಿಧಾನಸೌಧದಲ್ಲಿ  ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ(MSP) ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ MSP ಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅವರ ಮೇಲೆ ಕ್ರಮ ತೆಗೆದುಕೊಳ್ಳು ಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ ರೂ 4290ಗಳನ್ನು ಹಾಗೂ ಜೋಳ ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳ 3371ಹಾಗೂ ಮಾಲದಂಡಿ  ಜೋಳ 3421 ಭತ್ತಕ್ಕೆ ಸಾಮಾನ್ಯವಾಗಿ ಪ್ರತಿ ಕ್ವಿಂಟಾಲ್ 2300. ಗ್ರೇಡ್ ಎ 2320 ದರ ನಿಗದಿಯಾಗಿದ್ದು ಈ ದರದಲ್ಲಿ  ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯ ಮಾಡಬೇಕು ಎಂದರು.

ಜಿಲ್ಲಾಧಿಕಾರಿಗಳು ಖರೀದಿ ಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾನದ ವ್ಯವಸ್ಥೆಯನ್ನು ಕಲ್ಲಿಸಬೇಕು  ಏಕೆಂದರೆ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲಿರಿವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದರು.

ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ‌ ಅಕ್ಕಿ ವಿತರಿಸಲು ತೀರ್ಮಾನಿಸಿದ್ದು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.

ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಬೇಟಿ ಮಾಡಿ ಪರಿಶೀಲನೆ ಮಾಡಬೇಕು  ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು  ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತ್ತು ಮಾಡಬೇಕು ಎಂದು ಜಿಲ್ಲಾಧಿಕಾರಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್,ಆಯುಕ್ತರಾದ ವಾಸಿ ರೆಡ್ಡಿ ವಿಜಯಜೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್,ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ  ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ ಎಸ್ ಎನ್ ಬಾಬು. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist