ಬೆಂಗಳೂರು, (www.thenewzmirror.com) ;
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಒಂದೊಂದೇ ದರ ಹೆಚ್ಚಳ ಮಾಡುತ್ತಿರೋ ಸರ್ಕಾರ ಸದ್ದಿಲ್ಲದೆ ಬಸ್ ಪ್ರಯಾಣ ದರವೂ ಏರಿಕೆಯಾಗುತ್ತೆ ಎನ್ನುವ ಮಾತುಗಳು ಕೇಳಿ ಬರ್ತಿದ್ದವು. ಅಷ್ಟೇ ಅಲ್ದೆ ದರ ಏರಿಕೆಗೆ ಸಾರ್ವಜನಿಕ ವಲಯದಿಂದಲೂ ವಿರೋಧ ವ್ಯಕ್ತವಾಗ್ತಿತ್ತು.
ಈ ಎಲ್ಲ ಗೊಂದಲಗಳ ನಡುವೆ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನೆಮ್ಮದಿಯ ಸುದ್ದಿ ನೀಡಿದ್ದು, ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ. ಕೆಎಸ್‌ಆರ್‌ಟಿಸಿ ಸೇರಿದಂತೆ ಉಳಿದ ಮೂರು ನಿಗಮಗಳ ಪ್ರಯಾಣ ದರವನ್ನು 2020 ರಲ್ಲಿ ಹೆಚ್ಚಿಸಲಾಗಿದೆ ಹಾಗೂ ಬಿಎಂಟಿಸಿ ಪ್ರಯಾಣ ದರವನ್ನು2014 ರ ಬಳಿಕ ಜಾಸ್ತಿ ಮಾಡಿಲ್ಲ. ಡೀಸೆಲ್ ಬೆಲೆ, ಸಿಬ್ಬಂದಿ ವೇತನ, ಸೇರಿದಂತೆ ನಿರ್ವಹಣಾ ವೆಚ್ಚ ಜಾಸ್ತಿಯಾಗಿದೆ. ಆದರೆ ಪ್ರಯಾಣ ದರ ಏರಿಕೆ ಸಂಬಂಧ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ತಿಳಿಸಿದರು.
ಇನ್ನು ಸಾರಿಗೆ ನಿಗಮಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಶೀಘ್ರವೇ ಹಂತ ಹಂತವಾಗಿ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.