ಬೆಂಗಳೂರು, (www.thenewzmirror.com) ;
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯೋಕೆ ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿತ್ತು. ಅಷ್ಟೇ ಅಲ್ದೆ ಅಂಕಿತಕ್ಕಾಗಿ ರಾಜ್ಯಪಾಲರ ಬಳಿಯೂ ಕಳುಹಿಸಿಕೊಡಲಾಗಿತ್ತು. ಆ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ.
ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜ್ಯಪಾಲರು ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಕಡತವನ್ನ ವಾಪಸ್ ಕಳುಹಿಸಿದ್ದರು. ಇದೀಗ ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಯುವ ಸುಗ್ರೀವಾಜ್ಞೆಗೆ ಕೊನೆಗೂ ಅಂಕಿತಹಾಕಿದ್ದಾರೆ. ಇದರ ಜತೆಗೆ ಹಲವು ಸಲಹೆಗಳನ್ನು ನೀಡಿದ್ದು, ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿತ್ತು. ಈ ಸ್ಪಷ್ಟೀಕರಣದೊಂದಿಗೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಮರು ರವಾನೆ ಮಾಡಲಾಗಿತ್ತು.
ಅಂತಿಮವಾಗಿ ಅಂಕಿತಹಾಕಿದ್ದಾರೆ. ಅಷ್ಟೇ ಅಲ್ಲ ಬಜೆಟ್ ಅಧಿವೇಶನದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಸಾಧಕ ಬಾಧಕದ ಬಗ್ಗೆ ಚರ್ಚೆ ನಡೆಸಿ ಅಂತಾ ಹೇಳಿದ್ದ ರಾಜ್ಯಪಾಲರು, ಈಗಿರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮಕೈಗೊಳ್ಳುತ್ತಿಲ್ಲ ಅಂತಾ ಪೊಲೀಸ್ ವ್ಯವಸ್ಥೆ ಬಗ್ಗೆಯೂ ಅಸಮಾಧನ ಹೊರಹಾಕಿದ್ದರು. ಮೈಕ್ರೋ ಫೈನಾನ್ಸ್ ವಿರುದ್ಧ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಅಂತಾ ಖಡಕ್ ಸಂದೇಶ ರವಾನಿಸಿ ಸುಗ್ರೀವಾಜ್ಞೆ ವಾಪಸ್ ಮಾಡಲಾಗಿತ್ತು.