ಬೆಂಗಳೂರು, (www.thenewzmirror.com) ;
ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನೆ ರೆಡ್ಡಿಗೆ ಸಿಬಿಐ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನ ತೆರವುಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣ ಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ಕೋರ್ಟ್ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಹಲವು ಬಾರಿ ಬಳ್ಳಾರಿ ಜಿಲ್ಲೆಗೆ ಪ್ರವೇಶ ಕೋರಿ ಕೋರ್ಟ್ ಗೆ ಮನವಿ ಸಲ್ಲಿಸಲಾಗಿತ್ತಾದರೂ ನ್ಯಾಯಾಲಯ ಮನವಿಯನ್ನ ತಿರಸ್ಕಾರ ಮಾಡಿತ್ತು. ಆದರೆ ಈಗ ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿ ಆದೇಶ ಹೊರಡಿಸಿದ್ದು, ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.