ಬೆಂಗಳೂರು, (www.thenewzmirror.com) ;
ಶ್ರಾವಣ ಆರಂಭವಾಗುತ್ತಿದ್ದಂತೆ ರಾಜ್ಯದ ಗೃಹ ಲಕ್ಷ್ಮೀಯರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕಳೆದ ಎರಡು ತಿಂಗಳಿನಿಂದ ಬಾಕಿ ಉಳಿದಿದ್ದ ಗೃಹ ಲಕ್ಷ್ಮೀ ಕಂತುಗಳನ್ನ ನಾಳೆಯೊಳಗೆ ಜಮೆ ಮಾಡಲಾಗುವುದು ಅಂತ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರಲಿಲ್ಲ. ಬಾಕಿ ಇದ್ದ ಕಂತುಗಳನ್ನ ಇಂದು ಅಥವಾ ನಾಳೆಯೊಳಗೆ ಬಿಡುಗಡೆ ಮಾಡಲಾಗುವುದು, ಈ ಬಗ್ಗೆ ಯಾವುದೇ ಗೊಂದಲ ಬೇಡ ಅಂತ ಸ್ಪಷ್ಟಪಡಿಸಿದ್ರು. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಅಂತ ಅಭಯ ನೀಡಿದ ಸಚಿವೆ, ಊಹಾ ಪೋಹಗಳಿಗೆ ತೆರೆ ಎಳೆದ್ರು.
ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ.
ಇನ್ನೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೂ ಇನ್ಮುಂದೆ ಗೃಹ ಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಮುಖ್ಯವಾಗಿ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿದ್ದು, ಬಿಪಿಎಲ್ ಕಾರ್ಡ್ ರದ್ದಾದ್ದರೆ ಗೃಹಲಕ್ಷ್ಮಿ ಹಣವೂ ರದ್ದಾಗಲಿದೆ ಎನ್ನಲಾಗಿದೆ.