Guarantee Scheme | ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಕುಂದುಕೊರತೆ ಆಲಿಸೋಕೆ ಹೆಲ್ಪ್ ಲೈನ್ ಬಿಡುಗಡೆ..!

ಬೆಂಗಳೂರು, (www.thenewzmorror.com) ;

ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕುಂದುಕೊರತೆಗಳನ್ನು ಆಲಿಸಲುವುದಕ್ಕಾಗಿ ದೂರವಾಣಿ ಸಂಖ್ಯೆಯಾದ 9480683972 ಗೆ ಕರೆ ಮಾಡಬಹುದೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ಜಿ. ಕೃಷ್ಣಪ್ಪ ತಿಳಿಸಿದರು.

RELATED POSTS

ಬಿಬಿಎಂಪಿ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಾರ್ಯಸೂಚಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹ ಜ್ಯೋತಿ ಯೋಜನೆ ಹಾಗೂ ಯುವ ಶಕ್ತಿ ಯೋಜನೆಗಳ ಕುರಿತಾಗಿ ಸಾರ್ವಜನಿಕರು ಅಗತ್ಯ ಮಾಹಿತಿ ಅಥವಾ ಸಮಸ್ಯೆಗಳನ್ನು ಹೇಳುವ ಸಲುವಾಗಿ ದೂರವಾಣಿ ಸಂಖ್ಯೆ 9480683972 ಯನ್ನು ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ಸರ್ಕಾದರ ಮಹತ್ವಾಕಾಂಕ್ಷೆ ಯೋಜನೆಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಹೇಳಿದರು.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಾರ್ವಜನಿಕರಿಂದ ಯಾವುದಾದರು ಅಹವಾಲು ಅಥವಾ ದೂರು ಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆಯ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿ, ಕುಂದುಕೊರತೆಗಳನ್ನು ಪರಿಶೀಲಿಸಿ, ಯಾವುದೇ ಅರ್ಹ ಫಲಾನುಭವಿಗಳು ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮವಹಿಸಲು ಸೂಚಿಸಿದರು.

ಈ ವೇಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರುಗಳಾದ ಜನಾರ್ಧನ್, ರಮೇಶ್ ಹೆಚ್, ನೌಶೀರ್ ಅಹ್ಮದ್, ಬಿ.ಎಸ್ ಗೋಪಾಲ ಕೃಷ್ಣ, 28 ವಿಧಾನಸಭಾ ಕ್ಷೇತ್ರಗಳ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಅವಿನಾಶ್ ಮೆನನ್ ರಾಜೇಂದ್ರನ್, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಗಳ ನೋಡಲ್ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist