ಬೆಂಗಳೂರು, (www.thenewzmirror.com) :
ಲೋಕ ಸಭೆ ಚುನಾವಣೆ ಹತ್ತಿರ ಬರುತ್ತಿದೆ. ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಆ ಗ್ಯಾರಂಟಿಗಳನ್ನ ಜನರಿಗೆ ತಿಳಿಸೋದು ಬಹು ಮುಖ್ಯವಾಗಿದೆ. ಹೀಗಾಗಿ ಐದು ಗ್ಯಾರಂಟಿಗಳು, ಸರ್ಕಾರದ ಸಾಧನೆಗಳನ್ನ ಜನರಿಗೆ ತಿಳಿಸೋ ನಿಟ್ಟಿನಲ್ಲಿ ಸರ್ಕಾರದ ಪರವಾಗಿ ಐವರು ಐವರು ಸಚಿವರನ್ನು ವಕ್ತಾರರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಆಹಾರ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳು, ದಾಖಲೆಗಳು, ಸರ್ಕಾರದ ಮಾಹಿತಿಗಳ ಬಗ್ಗೆ ಸಚಿವರುಗಳಿಗೆ ಮಾಹಿತಿ ನೀಡುವಂತೆಯೂ ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.