Health news | ಡೆಂಗ್ಯೂ, ಮಲೇರಿಯಾ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಪ್ರಯೋಗ..!, ಸೊಳ್ಳೆ, ಮೊಟ್ಟೆಗಳನ್ನ ನಾಶಮಾಡುವ ಸಾಧನವೇ ಓವಿ ಟ್ರ್ಯಾಪ್..!

ಬೆಂಗಳೂರು, (www.thenewzmirror.com);

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹರಡುತ್ತಿರೋ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡಾ ತೋಡಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಮುಂದಾಗಿದ್ದು, ಇದಕ್ಕಾಗಿ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದೆ.

RELATED POSTS

ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನ ಅಳವಡಿಸೋಕೆ ಮುಂದಾಗಿದ್ದು, ಪ್ರಾಯೋಗಿಕವಾಗಿ ಬೆಂಗಳೂರಿನ ಬಿನ್ನಿಪೇಟೆ ವಾರ್ಡ್ ನ  ಗೋಪಾಲಪುರ ಪ್ರದೇಶದಲ್ಲಿ ಅಳವಡಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಾಯೋಗಿಕವಾಗಿ ಸಾಧನ ಅಳವಡಿಸೋ ಕಾರ್ಯಕ್ಕೆ ಚಾಲನೆ ನೀಡಿದ್ದು, ಆರಂಭದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನು ಮನೆ, ಮನೆಗಳಿಗೆ ಅಳವಡಿಸಲಾಗಿದೆ.

ಈಡಿಸ್ ಸೊಳ್ಳೆಗಳನ್ನು ನಾಶಪಡಿಸುವ ಬಯೋ ಸಾಧನಗಳನ್ನು ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣವಾದರೆ, ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಮಿಕ ರೋಗಗಳನ್ನೂ ಕಂಟ್ರೋಲ್​ಗೆ ತರಬಹುದು. ಮುಂಬೈನ ಧಾರಾವಿ ಕೊಳಗೇರಿ ಪ್ರದೇಶದಲ್ಲೂ ಈ ಪ್ರಯೋಗ ನಡೆಯುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ, ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ  ಆರೋಗ್ಯ ಸಚಿವರು ತಿಳಿಸಿದರು.

ಏನಿದು ಬಯೋ ಟ್ರ್ಯಾಪ್ ? 

ಇದೊಂದು ಮಡಿಕೆ ಆಕಾರದ ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರೆಸಲಾಗುತ್ತದೆ. ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನು ಆಕರ್ಷಿಸಿ ಸಾಯಿಸುತ್ತದೆ. ಈಡಿಸ್ ಸೊಳ್ಳೆಗಳು ಹಾಗೂ ಸೊಳ್ಳೆಗಳ ಮೊಟ್ಟೆಗಳನ್ನು ನಾಶಪಡಿಸುತ್ತದೆ. ಬಯೋ ಟ್ರ್ಯಾಪ್ ಬಳಕೆಯಿಂದ ಶೇಕಡಾ 60 ರಷ್ಟು ಸೊಳ್ಳೆಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist