ಬೆಂಗಳೂರು, (www.thenewzmirror.com);
2022 ರಲ್ಲಿ ಇಡೀ ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣ ಇದೀಗ ಲೋಕಸಭಾ ಚುನಾವಣೆ ಹೊತ್ತಲಿ ಮತ್ತೆ ಮುನ್ನಲೆಗೆ ಬಂದಿದೆ. ಹಿಂದೆ ಆಡಳಿತ ಮಾಡಿದ್ದ ಬಿಜೆಪಿ ಕರ್ನಾಟಕದಲ್ಲಿ ಹಿಜಾಬ್ ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಆಡಳಿತಕ್ಕೆ ಬಂದ ಕಾಂಗ್ರೆಸ್ ಆ ಆದೇಶವನ್ನ ವಾಪಾಸ್ ಪಡೆದಿದೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಸಿತ್ತು ಹಿಜಾಬ್ (Hijab) ವಿವಾದ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.
https://www.instagram.com/reel/C1KYBvfIkDR/?igsh=MXM4OWpyemkycXFmMg==
ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನೋ ಹಿಜಾಬ್, ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.