ಬೆಂಗಳೂರು, (www.thenewzmirror.com) ;
2019ರ ಏಪ್ರಿಲ್ 1ಕ್ಕೂ ಮೊದಲು ನೋಂದಣಿಯಾಗಿರುವ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಿಕೊಳ್ಳಲು ನಾಳೆನೇ ಕೊನೆಯ ದಿನ. ಇದೂವರೆಗೂ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳದಿದ್ದರೆ ಭಾನುವಾರದಿಂದ ದಂಡ ಕಟ್ಟೋಕೆ ಸಿದ್ದರಾಗಬೇಕು. ಈಗಾಗಲೇ ನಾಲ್ಕು ಬಾರಿ ಗಡುವು ವಿಸ್ತರಣೆ ಮಾಡಿದ್ದು ಮತ್ತೆ ವಿಸ್ತರಣೆ ಮಾಡೋದಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
HSRP ಅಳವಡಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಈಗಾಗಲೇ ಕಳೆದ 1 ವರ್ಷದಿಂದ ದಿನಾಂಕ ವಿಸ್ತರಣೆ ಮಾಡುತ್ತಲೇ ಬರುತ್ತಿದ್ದೇವೆ, ಮತ್ತೆ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ಸಚಿವರು ಖಡಕ್ ಆಗಿ ಹೇಳಿದ್ದಾರೆ.
ಇನ್ನೂ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲಿಲ್ಲ ಅಂದ್ರೆ ಈ ಲಿಂಕ್ ಬಳಸಿ ರಿಜಿಸ್ಟರ್ ಮಾಡಿಸಿಕೊಳ್ಳಬಹುದು. https://www.siam.in/hrspsubmit.aspx?mpgid=91&pgidtrail=91
ಸೆ.16ರಿಂದ ಎಲ್ಲಾ ಜಿಲ್ಲೆಗಳಲ್ಲೂ ಮೊದಲ ಬಾರಿಗೆ 500 ರೂ. ದಂಡ, ಎರಡನೇ ಬಾರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ 2 ಕೋಟಿ ವಾಹನಗಳು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿದೆ. ಸದ್ಯ ಸಾರಿಗೆ ಇಲಾಖೆ ನೀಡಿರುವ ಮಾಹಿತಿ ಪ್ರಕಾರ 1.49 ಕೋಟಿ ವಾಹನಗಳು ಇನ್ನೂ HSRP ಹಾಕಿಸಿಲ್ಲ. ಹೀಗಾಗಿ ಮತ್ತೆ ಗಡುವು ವಿಸ್ತರಣೆ ಮಾಡುತ್ತಾ ಇಲ್ಲ ದಂಡ ವಿಧಿಸಲು ಮುಂದಾಗುತ್ತಾ ಕಾದು ನೋಡಬೇಕು.
ನಾಲ್ಕು ಬಾರಿ ಗಡುವು ವಿಸ್ತರಣೆ
HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ನಾಲ್ಕು ಬಾರಿ ವಿಸ್ತರಿಸಲಾಗಿದೆ. ಮೊದಲ ಬಾರಿ 2023ರ ಆಗಸ್ಟ್ 16ನೇ ತಾರೀಖಿನಿಂದ ನವೆಂಬರ್ 16ರ ವರೆಗೆ ಅವಕಾಶ ನೀಡಲಾಗಿತ್ತು. ಆದರೆ, ವಾಹನ ಸವಾರರು ಇದಕ್ಕೆ ಹೆಚ್ಚು ಸಕ್ರಿಯವಾಗಿ ಪ್ರತಿಕ್ರಿಯೆ ನೀಡಿರಲಿಲ್ಲ. ಎರಡನೇ ಬಾರಿ 2023ರ ಫೆಬ್ರುವರಿ 17ರ ವರೆಗೆ ಮತ್ತೊಮ್ಮೆ ಅವಕಾಶ ನೀಡಲಾಗಿತ್ತು. ಆದರೆ, ಆಗಲೂ ಕೆಲವು ವಾಹನ ಸವಾರರು ಕ್ಯಾರೇ ಎನ್ನಲಿಲ್ಲ. ಮೂರನೇ ಬಾರಿ ಮೇ 31ರ ವರೆಗೆ ಮೂರನೇ ಬಾರಿಯೂ ಇದನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅಂತಿಮವಾಗಿ ಸೆಪ್ಟೆಂಬರ್ 15ರ ವರೆಗೆ ಅವಕಾಶ ನೀಡಲಾಗಿದೆ.
ನಂಬರ್ ಪ್ಲೇಟ್ ಅಳವಡಿಕೆ ಹೇಗೆ?
– https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.
– ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
– ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
– HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
– HSRP ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
– ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
– ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
– ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
– ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.