Political News | ‘ಪಂಚೆ ಉಟ್ಟುಕೊಂಡು ಬಂದರೆ ಸರ್ಕಾರದಲ್ಲಿ ಬೆಲೆ ಸಿಗಲ್ಲ., ಸೂಟು ಬೂಟು ಧರಿಸಿ, ಹಣದ ಸೂಟ್‌ಕೇಸ್‌ ತಂದ್ರೆ ಮಾತ್ರ ಬೆಲೆ’

ಬೆಂಗಳೂರು, (www.thenewzmirror.com) ;

ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದಕ್ಕೆ ಈಗಲೇ ಕಡಿವಾಣ ಹಾಕದಿದ್ದರೆ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತೆ. ಸರ್ಕಾರ ಹಾಗೂ ಅದರ ಅಧೀನದಲ್ಲಿ ಬರುವ ಸ್ವಾಯತ್ತ ಸಂಸ್ಥೆಯಲ್ಲಿ ಸ್ವಾತಂತ್ರ್ಯವಿಲ್ಲ, ಸೂಟು ಬೂಟು ಧರಿಸಿ, ಹಣದ ಸೂಟ್‌ಕೇಸ್‌ ತಂದರೆ ಮಾತ್ರ ಬೆಲೆ ಎಂಬಂತಾಗಿದೆ. ರಾಜ್ಯ ಈ ನಿಲುವು ಬದಲಾವಣೆ ಮಾಡಿಕೊಳ್ಳದಿದ್ದರೆ ನಮ್ಮ ಹೋರಾಟ ನಿರಂತರವಾಗಿರುತ್ತೆ ಅಂತ ವಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಕೆ ಕೊಟ್ಟರು.

RELATED POSTS

ಸಕ್ಕರೆ ಕಾರ್ಖಾನೆ ಮರು ಆರಂಭಕ್ಕೆ ಅನುಮತಿ ನೀಡದ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜತೆ ಕೈ ಜೋಡಿಸಿ, ಈ ಎಚ್ಚರಿಕೆ ಕೊಟ್ಟಿದ್ದಾರೆ. ಇಲ್ಲಿನ ಅಧಿಕಾರಿಗಳು ಸ್ಥಳಕ್ಕೆ ಬಾರದೆ ವಿಧಾನಸೌಧದ ಕಡೆಗೆ ಮುಖ ಮಾಡಿಕೊಂಡು ಕೂತಿದ್ದಾರೆ. ಒಂದು ಕಡೆ ಮುಡಾ ಹಗರಣ, ಮತ್ತೊಂದು ಕಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಇನ್ನೊಂದು ಖರ್ಗೆ ಹಗರಣ ನಡೆದಿದೆ. ಇಂತಹ ಸ್ಥಿತಿಯಲ್ಲಿ ಸ್ವಾಯತ್ತ ಸಂಸ್ಥೆಯ ಮೇಲೆ ಈ ಕೆಟ್ಟ ಸರ್ಕಾರ ಒತ್ತಡ ಹೇರಿದೆ. ಹಿಂದುಳಿದ ಪ್ರದೇಶವಾದ ಕಲಬುರ್ಗಿಯಲ್ಲಿ ಮುಳುಗಿಹೋಗಿದ್ದ ಸಕ್ಕರೆ ಕಾರ್ಖಾನೆಯನ್ನು ಶಾಸಕ ಯತ್ನಾಳ್‌ ಅಭಿವೃದ್ಧಿಪಡಿಸಿದ್ದಾರೆ. ಈ ಕಾರ್ಖಾನೆಯಿಂದ ಎರಡು ಸಾವಿರ ಜನರಿಗೆ ಉದ್ಯೋಗ ದೊರೆತಿದೆ, ಸಾವಿರಾರು ರೈತರಿಗೆ ಲಾಭವಾಗುತ್ತಿದೆ. ಆದರೆ ಕಾಂಗ್ರೆಸ್‌ ದ್ವೇಷದ ರಾಜಕಾರಣ ಮಾಡುತ್ತಿದೆ. ಹೈಕೋರ್ಟ್‌ ಆದೇಶವಿದ್ದರೂ ಕಾರ್ಖಾನೆ ಮರು ಆರಂಭಕ್ಕೆ ಅನುಮತಿ ನೀಡುತ್ತಿಲ್ಲ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ನಾವೆಲ್ಲರೂ ಅವರ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದೇವೆ. ಇದು ಸ್ವಾಯತ್ತ ಸಂಸ್ಥೆಯಾಗಿದ್ದರೂ, ಇಲ್ಲಿ ಸ್ವಾತಂತ್ರ್ಯ ಕಾಣುತ್ತಿಲ್ಲ. ಅಧಿಕಾರಿಗಳು ಪ್ರತಿಯೊಂದಕ್ಕೂ ಸಚಿವರ ಕಡೆ ನೋಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ ಎಂದು ದೂರಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಎಂದರೆ ಮಾಲಿನ್ಯವನ್ನು ನಿಯಂತ್ರಿಸುವ ಸಂಸ್ಥೆ. ಆದರೆ ಇಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕೊನೆಯೇ ಇಲ್ಲ. ಇಲ್ಲಿಗೆ ಪಂಚೆ ಉಟ್ಟುಕೊಂಡು ಬಂದರೆ ಬೆಲೆ ಇಲ್ಲ. ಸೂಟು ಬೂಟು ಧರಿಸಿ, ಹಣದ ಸೂಟ್‌ಕೇಸ್‌ ತೆಗೆದುಕೊಂಡು ಬಂದರೆ ಮಾತ್ರ ಬೆಲೆ. ಇದು ಕಾರ್ಪೊರೇಟ್‌ ಕಂಪನಿಯಂತಾಗಿದೆ. ಅಧಿಕಾರಿಗಳಿಗೆ ಮೇಲಿನಿಂದ ಫೋನ್‌ ಕರೆ ಬಂದಿದ್ದು, ಯತ್ನಾಳ್‌ ಅವರಿಗೆ ತೊಂದರೆ ಕೊಡಲು ಸೂಚಿಸಲಾಗಿದೆ. ಮಂಡಳಿಯ ಅಧ್ಯಕ್ಷರು ಸ್ಥಳಕ್ಕೆ ಬಾರದೆ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಹೈಕೋರ್ಟ್‌ ಆದೇಶವನ್ನು ಜಾರಿ ಮಾಡುವುದಿಲ್ಲ ಎಂದು ಲಿಖಿತವಾಗಿ ಕೊಡಲಿ ಎಂದು ಆಗ್ರಹಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist